ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದಪ್ಪ ಬೀರಲಿಂಗೇಶ್ವರ ಗಂಗೆಸ್ಥಳ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಹಾಲುಮತ ಸಮಾಜದ ಕಂಪ್ಲಿ ನಗರ ಘಟಕದಿಂದ ಅದ್ದಪ್ಪ ಭೀರಲಿಂಗೇಶ್ವರ ಗಂಗೆಸ್ಥಳ ಮೆರವಣಿಗೆ ಶ್ರಾವಣ ಮಾಸದ ಪ್ರಯುಕ್ತ ವಿಜೃಂಭಣೆಯಿಂದ ಜರುಗಿತು.
ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರಾ ನದಿಯಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ವೆಂಕಟರಮಣ ದೇವಸ್ಥಾನದಿಂದ ಆರಂಭಗೊಂಡ ಭವ್ಯ ಗಂಗೆಸ್ಥಳ ಮೆರವಣಿಗೆ ನಡುವಲ ಮಸೀದ, ಅಂಬೇಡ್ಕರ್ ವೃತ್ತ, ಅದ್ದಪ್ಪ ದೇವಸ್ಥಾನ, ಸರ್ಕಾರಿ ಆಸ್ಪತ್ರೆ, ಸಣಾಪುರ ರಸ್ತೆ ಮೂಲಕ ಅದ್ದಪ್ಪ ಭೀರಲಿಂಗೇಶ್ವರ ದೇವಸ್ಥಾನ ಬಳಿ ಸಂಪನ್ನಗೊಂಡಿತು.
ಈ ಮೆರವಣಿಗೆಯಲ್ಲಿ ಮಹಿಳೆಯರ ಕುಂಭ, ಕಳಸ, ಡೊಳ್ಳು ಕುಣಿತ ಸೇರಿದಂತೆ ವಾದ್ಯಗಳೊಂದಿಗೆ ಮೆರವಣಿಗೆ ನಡೆಯಿತು. ಅದ್ದಪ್ಪ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಹೂವಿನ ಅಲಂಕಾರ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆಯಿಂದ ಜರುಗಿದವು. ಹಾಲುಮತ ಸಮಾಜದವರು ಸೇರಿದಂತೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ಕಾಯಿ, ಕರ್ಪೂರ ಅರ್ಪಿಸಿ, ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಹಾಲುಮತ ಸಮಾಜದ ನಗರ ಘಟಕ ಅಧ್ಯಕ್ಷ ಕೆ.ವಸಂತಕುಮಾರ, ಉಪಾಧ್ಯಕ್ಷ ಕುರಿ ಸಿದ್ದಪ್ಪ, ಖಜಾಂಚಿ ಶೇಖರಪ್ಪ ಬಳ್ಳಾರಿ, ಮುಖಂಡರಾದ ಕುರಿ ಹುಸೇನಪ್ಪ, ಕೆ.ಯಮನೂರಪ್ಪ, ಮರಿ ಬಿಂಗಿ ವಿರುಪಣ್ಣ, ಬಿಂಗಿ ವೆಂಕಟೇಶ, ಕೇದರ್‌ನಾಥ, ವಿರುಪಣ್ಣ ಪಕ್ಕೀರಪ್ಪ, ಬಿ.ದೇವೇಂದ್ರ, ಪೆದ್ದಣ್ಣ, ಬಳ್ಳಾರಿ ಲಕ್ಷ್ಮಣ ಸೇರಿದಂತೆ ಸಮಾಜದವರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!