ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದರೋಜಿ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ ನಾಯಕ ಅವಿರೋಧ ಆಯ್ಕೆ

ಬಳ್ಳಾರಿ / ಕಂಪ್ಲಿ: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ ನಾಯಕ, ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಗೊಂಡರು.
ಇಲ್ಲಿನ ಕಚೇರಿಯಲ್ಲಿ ಸೋಮವಾರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ಚುನಾವಣಾಧಿಕಾರಿ (ಮುಖ್ಯ ಕಾರ್ಯನಿರ್ವಾಹಕ) ವಿ.ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ತಲಾ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ ಹಿನ್ನಲೆ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ ನಾಯಕ, ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು.
ಈ ಚುನಾವಣೆ ಪ್ರಕ್ರಿಯೆಯಲ್ಲಿ ಸಂಘದ ನಿರ್ದೇಶಕರಾದ ಪಿ.ಎಸ್.ಲಿಂಗಪ್ಪ, ವಲಿ ಮಸೀದಿ, ಡಿ.ವಿ.ಮಂಜುನಾಥ, ಕೆ.ರಾಮಾಂಜಿನೇಯ, ವೆಂಕಟೇಶ ಸಾಲುಮನೆ, ಶ್ರೀನಿವಾಸ ಡಿ, ದಾನಪ್ಪ ಹೆಚ್, ತಿಮ್ಮಯ್ಯ ಕೆ, ಶೋಭಾದೇವಿ ಟಿ, ನಾಗಮ್ಮ, ರಮೇಶ(ಬ್ಯಾಂಕ್ ಪ್ರತಿನಿಧಿ) ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರ್ಪಣೆಯೊಂದಿಗೆ ಗೌರವಿಸಲಾಯಿತು.
ತಾಪಂ ಮಾಜಿ ಉಪಾಧ್ಯಕ್ಷ ಮಾದಾಪುರ ಮಾರೆಪ್ಪ ಮಾತನಾಡಿ, ಇಲ್ಲಿನ ದರೋಜಿ ಸೊಸೈಟಿ ಅಭಿವೃದ್ಧಿಗೊಳಿಸುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ಸಕಾಲದಲ್ಲಿ ತಲುಪಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸರ್ವ ನಿರ್ದೇಶಕರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ವಿ.ಜನಾರ್ಧನ, ಸಿಬ್ಬಂದಿಗಳಾದ ವಿ.ಎರ‍್ರಿಸ್ವಾಮಿ, ಕೆ.ಶಿವಕುಮಾರ, ಕೆ.ರಾಮಾಂಜಿನಿ ಸೇರಿದಂತೆ ಸ್ಥಳೀಯ, ಮುಖಂಡರು, ರೈತರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!