ವಿರಾಜಪೇಟೆ : ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಹಿರಿ ಅವರು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಕರ್ನಾಟಕದ ಅಭಿವೃದ್ಧಿ ಆಯ್ಕೆಗಳು ಹಾಗೂ ನೀತಿ ಆಯೋಗದೊಂದಿಗೆ ಮತ್ತಷ್ಟು ಸಹಯೋಗದೊಂದಿಗೆ ರಾಜ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಯಿತು. ರಾಜ್ಯದ ಆರ್ಥಿಕ, ಔದ್ಯೋಗಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಗೃಹ, ಇ-ಆಡಳಿತ ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಪ್ರಿತುನ್ ಪೂವಣ್ಣ




















