ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಜಾಸೇವೆ ಆಂದೋಲನ ಪೂರ್ವಭಾವಿ ಸಭೆ.

ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಸುಲಭವಾಗಿ ಉಪಯೋಗವಾಗಬೇಕು ಎಂದು ಪ್ರಜಾಸೇವೆ ಆಂದೋಲನ ಪೂರ್ವಭಾವಿ ಸಭೆ.
ಸೆಪ್ಟಂಬರ್ 5 ರಂದು ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಪ್ರಜಾ ಸೇವಾ ಆಂದೋಲನ.

ಕೊರಟಗೆರೆ : ಕರ್ನಾಟಕ ರಾಜ್ಯಸರ್ಕಾರದ ಹೊಸ ಯೋಜನೆಯಾದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಮಾನ್ಯ ಘನವೆತ್ತ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕೊರಟಗೆರೆ ತಾಲೂಕು ದಂಡಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ತಾಲ್ಲೂಕು ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಸಭೆಯನ್ನು ಕರೆಯಲಾಗಿತ್ತು.
ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಕಚೇರಿ ಅಧಿಕಾರಿಗಳು ಭಾಗವಹಿಸಿದ್ದರು ಮಾನ್ಯ ತಹಸೀಲ್ದಾರ್ ರವರು ಮಾತನಾಡಿ ಮಾನ್ಯ ಉಪಮುಖ್ಯಮಂತ್ರಿಗಳ ಕ್ಷೇತ್ರವಾದ ನಮ್ಮ ಕೊರಟಗೆರೆ ಕ್ಷೇತ್ರದಲ್ಲಿ ಎಲ್ಲಾ ಸಾರ್ವಜನಿಕರಿಗೂ ಸರ್ಕಾರದ ಸೇವೆ ಸುಲಭವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಸಿಗುವಂತಾಬೇಕು. ಸರ್ಕಾರದ ಹೊಸ ಯೋಜನೆ ಸಂಪೂರ್ಣವಾಗಿ ಕಾರ್ಯಗತವಾಗಿ ಯಶಸ್ವಿಯಾಗಬೇಕಾದರೆ ಸರ್ಕಾರದ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಭಾಗವಹಿಸಬೇಕು ಹಾಗೂ ತಾಲ್ಲೂಕಿನ ಪತ್ರಕರ್ತರು ಈ ಯೋಜನೆಯ ಬಗ್ಗೆ ಹರಿವು ಮೂಡಿಸಿ ಜನ ಜಾಗೃತಿ ಮೂಡಿಸಬೇಕು ಎಂದು ಪತ್ರಕರ್ತರನ್ನು ಉದ್ದೇಶೀಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ಪತ್ರಕರ್ತರು ಭಾಗವಹಿಸಿ ಸಭೆ ಯಶಸ್ವಿಯಾಗಲು ಸಹಕರಿಸಿದರು.
ಸೆ.5ರಂದು ತಾಲೂಕಿನ ಪ್ರತಿ ವಿಧಾನಸಭಾ ಕ್ಷೇತ್ರದ ಹೊಳವನಹಳ್ಳಿ ಸಮುದಾಯ ಭವನದಲ್ಲಿ ಮೊದಲನೇ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಸಭೆಯಲ್ಲಿ ಜನರು ದೂರು ಸಲ್ಲಿಕೆಗೆ ಅವಕಾಶ ಇರಲಿದೆ.

ಜನತೆಯ ಸಮಸ್ಯೆಗಳ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಪಾರದರ್ಶಕವಾಗಿ ಸಮಸ್ಯೆಗಳಿಗೆ ಪರಿಹಾರ ನೀಡಲು ಸೆಪ್ಟಂಬರ್ 5 ರಂದು ಹೊಳವನಹಳ್ಳಿ ಸಮುದಾಯ ಭವನದಲ್ಲಿ ಆಯೋಜಿಸಿರುವ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೋಬಳಿ ಮಟ್ಟದ ಅಧಿಕಾರಿಗಳಿಗೆ ತಹಸೀಲ್ದಾರ್ ಮಂಜುನಾಥ್ ನಿರ್ದೇಶನ ನೀಡಿದರು.

ವರದಿ ಪ್ರಸನ್ನ ಕುಮಾರ್. ಎಸ್ .ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!