ಅಕ್ಷಯ ಬ್ಲೂ ಜಮ್ ಶಾಲೆಯ ವತಿಯಿಂದ ನಮ್ಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಈ ಶುಭ ಸಂದರ್ಭದಲ್ಲಿ ನಮ್ಮ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಕಾರ್ಯಕ್ರಮಕ್ಕೆ ನಮ್ಮ ಶಾಲೆಯ ಪೋಷಕರು ಆಗಮಿಸಿ, ಮಕ್ಕಳನ್ನು ಪ್ರೋತ್ಸಾಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಹಬ್ಬಗಳ ಮಹತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಈ ಆಚರಣೆ ಅತ್ಯಂತ ಸಂತೋಷದಾಯಕವಾಗಿತ್ತು.
ಶ್ರೀಕೃಷ್ಣನ ಕೃಪೆ ಎಲ್ಲರ ಮೇಲಿರಲಿ. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಶಾಲೆಯ ಆಡಳಿತ ಮಂಡಳಿ ಸಂಧ್ಯಾ ಶಶಿ ಕಿರಣ್, ಭವ್ಯ ಕ್ರಾಂತಿ, ಶಾಲೆಯ ಶಿಕ್ಷಕರಾದ ಸೀಮಾ , ಹರಿತ, ಗಾನಶ್ರೀ, ನಜ್ರೀನ್, ಅನುಷಾ, ನಾಗಮಣಿ, ಪುಷ್ಪ ಹಾಗೂ ಮಕ್ಕಳು ಪೋಷಕರು ಹಾಜರಿದ್ದರು.
ವರದಿ ಪೃಥ್ವಿರಾಜ್ ಜಿ. ವಿ.




















