ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಸಡಗರದ ‘ಶಿಕ್ಷಕರ ದಿನಾಚರಣೆ’ : ಗಮನ ಸೆಳೆದ ಮಕ್ಕಳ ಸಾಂಸ್ಕೃತಿಕ ವೈಭವ

ಬಳ್ಳಾರಿ / ಕಂಪ್ಲಿ : ಇಲ್ಲಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ‘ಶಿಕ್ಷಕರ ದಿನಾಚರಣೆ’ಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಶಾಲೆಯ ಮುಖ್ಯಗುರುಗಳಾದ ಬಡಿಗೇ‌ರ್ ಜಿಲಾನಸಾಬ್‌ ಅವರು, “ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದೆ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲೇ ಮಕ್ಕಳಿಗೆ ಇಂತಹ ಸಾಂಸ್ಕೃತಿಕ ಹಾಗೂ ಆದರ್ಶ ಹಿನ್ನೆಲೆಯ ಪರಿಚಯ ಮಾಡಿಸಬೇಕು,” ಎಂದು ಕರೆ ನೀಡಿದರು.
ದಿನಾಚರಣೆಯ ಅಂಗವಾಗಿ ಶಾಲೆಯ ಪುಟ್ಟ ಮಕ್ಕಳು ಆಕರ್ಷಕ ಸಾಂಸ್ಕೃತಿಕ ವೇಷಭೂಷಣಗಳನ್ನು ಧರಿಸಿ ಬಂದು ಎಲ್ಲರ ಗಮನ ಸೆಳೆದರು. ಮಕ್ಕಳ ಮುದ್ದಾದ ನೃತ್ಯ ಮತ್ತು ಸಡಗರವು ಕಾರ್ಯಕ್ರಮದ ಕಳೆಯನ್ನು ಹೆಚ್ಚಿಸಿತ್ತು.
ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರಿಗೆ ಗೌರವ ವಂದನೆ ಸಲ್ಲಿಸಿ ಕೇಕ್ ಕತ್ತರಿಸಿ ಕೃತಜ್ಞತೆ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಕೆ.ಶ್ವೇತಾ, ಜೆ.ಅಕ್ಷತಾ, ಕೊಲ್ಕ‌ರ್ ಉಮಾ, ವರ್ಷಾ ಮಜುಂದಾರ್, ಮಠದ ಸುನೀತಾ, ಡಿ.ಉಮಾ, ಖಜಾಬನಿ ಹಾಗೂ ಸಹಾಯಕಿ ಶರ್ಮಾಸಬಿ ಸೇರಿದಂತೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!