ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆಯರು ಸರ್ಕಾರಿ‌ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು : ಶಾಸಕ ಡಾ.ಮಂತರ್ ಗೌಡ

ಕುಶಾಲನಗರ : ಮಹಿಳೆಯರು ಸರ್ಕಾರದ ಹಾಗೂ ಸಂಘ-ಸಂಸ್ಥೆಗಳ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು.

ಅವರು ಕುಶಾಲನಗರ ಸಮೀಪದ ಗೊಂದಿ ಬಸವನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶನೈಶ್ವರ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯ. ಶಿಕ್ಷಣ ಶಾಶ್ವತ ಆಸ್ತಿಯಾಗಿದ್ದು, ಅದರ ಮೂಲಕ ಜೀವನದ ಗುರಿಯನ್ನು ತಲುಪಲು ಸಾಧ್ಯ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ತಳಮಟ್ಟದ ಜನರಿಗೆ ಅಗತ್ಯವಿರುವ ಆರ್ಥಿಕ ಹಾಗೂ ಸಾಮಾಜಿಕ ಯೋಜನೆಗಳನ್ನು ತಲುಪಿಸುತ್ತಿರುವ ಬಗ್ಗೆ ಶಾಸಕರು ಹೆಮ್ಮೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಹಲವು ಯೋಜನೆಗಳು ಸಮಾಜದ ಬಹುತೇಕ ಜನರಿಗೆ ಸಹಕಾರಿಯಾಗುತ್ತಿದ್ದು, ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವುದು ಸಂತಸ ತಂದಿದೆ ಎಂದರು.

ಯೋಜನೆಯಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ದೇವರ ಹೆಸರನ್ನು ಕೆಡಿಸುವವರ ಉದ್ದಾರ ಅಸಾಧ್ಯ. ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಕೆಡಿಸಲು ಯತ್ನಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ರಂಜನ್ ಆಗ್ರಹಿಸಿದರು.

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರ ಬದುಕಿನ ಬಲವರ್ಧನೆ ಸಾಧ್ಯವಾಗಿದೆ. ಸಮಾಜ ನಿಂತ ನೀರಾಗಬಾರದು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಅರ್ಚಕರಾದ ಕೆ. ಗೌಡಯ್ಯ ಹಾಗೂ ರಾಮ ನಾಯಕ ದಂಪತಿಗಳನ್ನು ಮತ್ತು ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗುಡ್ಡೆ ಹೊಸೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ವರಮಹಾಲಕ್ಷ್ಮಿ ಪೂಜಾ ಸಮಿತಿ, ಗುಡ್ಡೆ ಹೊಸೂರು ವಲಯ ಹಾಗೂ ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ಸದಾಶಿವ ಸ್ವಾಮೀಜಿ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಮತ್ತಿತರರು ಗೊಂದಿ ಬಸವನಹಳ್ಳಿ ಮಾರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯ ಮೂಲಕ ಶನೈಶ್ವರ ದೇವಾಲಯಕ್ಕೆ ತೆರಳಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!