ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ‌ಗೌರಿ ಗಣೇಶೋತ್ಸವದ ಪೂರ್ವಭಾವಿ ಸಭೆ

ವಿರಾಜಪೇಟೆ: ಪ್ರಸಿದ್ಧ ಗಣೇಶೋತ್ಸವದ ಪೂರ್ವಭಾವಿ ಸಭೆಯಲ್ಲಿ, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು.
ಮಾನ್ಯ ಶಾಸಕರ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಆಯೋಜನೆಗೊಂಡ ಈ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಗಣೇಶೋತ್ಸವ ಸಮಿತಿಯ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಪ್ರತಿ ವರ್ಷದಂತೆ ಈ ವರ್ಷವೂ ಅತ್ಯಂತ ವಿಜೃಂಭಣೆಯಿಂದ, ಸಕಲ ವ್ಯವಸ್ಥೆಗಳನ್ನು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುತ್ತಾ ಶ್ರೀ ಗಣೇಶೋತ್ಸವವನ್ನು ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು. ಗಣೇಶೋತ್ಸವ ಸಮಿತಿಯವರ ಅವಾಲುಗಳನ್ನು ಹಾಗೂ ಬೇಡಿಕೆಗಳನ್ನು ಆಲಿಸಿದ ಮಾನ್ಯ ಶಾಸಕರು, ಹಲವು ಸಲಹೆ ಸೂಚನೆಗಳನ್ನು ನೀಡಿದರಲ್ಲದೆ, ಪ್ರತಿಯೊಂದು ಸಮಿತಿಯವರು ಅತ್ಯಂತ ಜವಾಬ್ದಾರಿಯಿಂದ ಹಾಗೂ ಕಾಳಜಿಯಿಂದ ಗಣೇಶೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅತ್ಯಂತ ಯಶಸ್ಸಿನಿಂದ ಸಂಪನ್ನಗೊಳಿಸಬೇಕು ಹಾಗೂ ಇದಕ್ಕೆ ಬೇಕಾದ ಎಲ್ಲಾ ಕಾರ್ಯತಂತ್ರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಯಿತು.

ಇಷ್ಟು ವರ್ಷ ಗಣೇಶೋತ್ಸವ ಆಚರಣೆ ಹೇಗೆ ನಡೆಯುತ್ತಿತ್ತು ಅದೇ ರೀತಿಯಲ್ಲಿ ನಡೆಯಲಿ. ಧ್ವನಿವರ್ಧಕ ವಿಷಯದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಬೇಕು ಮುಂಜಾಗ್ರತಾ ಕ್ರಮವನ್ನು ಕಟ್ಟುನಿಟ್ಟಾಗಿ ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ಮಾನ್ಯ ಶಾಸಕರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಬಿಂದು ಮಣಿ ರವರು ಮಾತನಾಡಿ, ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಾಳೇಟೀರ ಬೋಪಣ್ಣ, ಮಾಜಿ ನಗರ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ವಕೀಲರಾದ ನರೇಂದ್ರ ಕಾಮತ್, ಗಣೇಶೋತ್ಸವ ಆಚರಣೆ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!