ಕೊಳ್ಳೇಗಾಲ: ಇಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿದ ಡಾ ಬಿ.ಆರ್.ಅಂಬೇಡ್ಕರ್ ನಿಗಮದ ಅಧ್ಯಕ್ಷರಾದ ಸಿ.ನರೇಂದ್ರರವರಿಗೆ ಕೊಳ್ಳೇಗಾಲ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾರ ಶಾಲು ಹಾಕಿ ಸ್ವಾಗತ ನೀಡಿದರು.
ಕೊಳ್ಳೇಗಾಲಕ್ಕೆ ಭೇಟಿ ನೀಡಿದ ವೇಳೆ ಸಿ .ನರೇಂದ್ರರವರು ಅಂಬೇಡ್ಕರ್ ಸರ್ಕಲ್ ನಲ್ಲಿರುವ ಬಾಬಾ ಸಾಹೇಬ್ ಡಾ .ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ನಂತರ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ರವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಬಿಡಿ ಹರಿ ಬಿಟ್ಟಿದ್ದ ಕಿಡಿಗೇಡಿಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದವರು ಯಾರೇ ಆದರೂ ಅವರಿಗೆ ಶಿಕ್ಷೆ ಆಗಲೇ ಬೇಕು ಮಂಡ್ಯ ಜಿಲ್ಲೆಯ ವೇದಮೂರ್ತಿ ಎಂಬ ವ್ಯಕ್ತಿ ಮೊದಲೇ ಒಂದು ಬಾರಿ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿ ಶಿಕ್ಷೆ ಅನುಭವಿಸಿದ್ದ ಆದರೆ ಮತ್ತೊಮ್ಮೆ ಅದೇ ರೀತಿ ಹೇಳಿಕೆಯನ್ನು ನೀಡಿದ್ದಾನೆ. ಆತನಿಗೆ ಶಿಕ್ಷೆ ಆಗಲೇಬೇಕು ,ಆದ್ದರಿಂದ ಸರ್ಕಾರದಲ್ಲಿ ತೀರ್ಮಾನವನ್ನು ಕೈಗೊಂಡು ಆತನಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಮುಂದಿನದ ದಿನಗಳಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ನಿಗಮಕ್ಕೆ ಹೆಚ್ಚು ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಿಸಿ ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ವಿತರಿಸಲಾಗುವುದು ಎಂದು ತಿಳಿಸಿದರು. ನಂತರ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು ಅಂಬೇಡ್ಕರ್ ಭವನದಲ್ಲಿ ಅಗತ್ಯ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಗೊಳಿಸಲು ಅಗತ್ಯ ಇರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ತಿಳಿಸಿದರು. ಇದರ ಜೊತೆ ಒಳ ಮೀಸಲಾತಿ ಅನ್ಯಾಯದ ವಿರುದ್ಧವಾಗಿ ಪ್ರತಿಭಟನೆ ನಡೆಸುವ ವೇಳೆ ಪ್ರಗತಿಪರ ಸಂಘಟನೆ 13 ಜನ ಹೋರಾಟಗಾರರ ಮೇಲೆ ದೂರು ದಾಖಲಾಗಿರುವ ಬಗ್ಗೆ ನನಗೆ ತಿಳಿದಿದೆ , ಮುಂದಿನ ದಿನಗಳಲ್ಲಿ ಸಾಮಾಜಿಕ ಹೋರಾಟ ಬಾಬಾ ಸಾಹೇಬರು ಕೊಟ್ಟ ಹಕ್ಕು ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ಹೋರಾಟ ಮಾಡುವುದು ನಮ್ಮ ಹಕ್ಕು , ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ಮೊದಲು ದ್ವನಿ ಎತ್ತಿ ಮೊದಲು ಹೋರಾಟಗಳು ಮಾಡುವವರು ಕೊಳ್ಳೇಗಾಲ ತಾಲ್ಲೂಕಿನ ಜನ ಆದ್ದರಿಂದ ಒಳಮೀಸಲಾತಿ ಅನ್ಯಾಯವನ್ನು ಖಂಡಿಸಿ ಹೋರಾಟ ಮಾಡಿರುವುದು ತಪ್ಪಲ್ಲ ಆದ್ದರಿಂದ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಜೊತೆ ಮಾತನಾಡಿ
13 ಜನ ಹೋರಾಟಗಾರರ ಮೇಲೆ ದಾಖಲಾಗಿರುವ ದೂರನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕೊಳ್ಳೇಗಾಲ ಭೀಮನಗರದ ಡಾ. ಬಿ.ಆರ್ .ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರಾದ ಆನಂದ್ ಮೂರ್ತಿ , ಉಪಾಧ್ಯಕ್ಷರಾದ ಕಿರಣ್ , ಪ್ರಧಾನ ಕಾರ್ಯದರ್ಶಿ ಪಾಪಣ್ಣ, ಶಶಿಧರ್ , ಮುಖಂಡರಾದ ಸಿದ್ಧಾರ್ಥ್ , ಮೂರ್ತಿ,
ನಗರಸಭೆ ಮಾಜಿ ಸದಸ್ಯರಾದ ರಮೇಶ್, ಮುಡಿಗುಂಡ ಶಾಂತರಾಜು, ಬಸ್ತಿಪುರ ಶಾಂತರಾಜು, ಮಂಜುನಾಥ್ ಹಾಗೂ ಇನ್ನಿತರರು ಇದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು




















