ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕೌಠಾ (ಬಿ.) ಗ್ರಾಮದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಬೋರವೆಲ್ ಮೋಟರ್ ಕೆಟ್ಟು ಹೋಗಿದ್ದು ಗ್ರಾಮಸ್ಥರು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಕೂಡಲೇ ಮೋಟಾರ್ ದುರಸ್ತಿಪಡಿಸಿ ನೀರಿನ ಸಮಸ್ಯೆ ಪರಿಹರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ನಿಕ್ಕಟಪೂರ್ ಗ್ರಾಮ ಪಂಚಾಯತ್ ಸದಸ್ಯ ರಾಜಮತಿ ಬಾಲಾಜಿ ಮನವಿ ಸಲ್ಲಿಸಿದಾರೆ. ಕೌಠಾ (ಬಿ. ) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೋರ್ವೆಲ್ ಮೋಟರ್ ಹಾಗೂ ನದಿಯ ಮೋಟಾರು ಕಳೆದ ಮೂರು ತಿಂಗಳಿಂದ ಕಾರ್ಯ ನಿರ್ವಹಿಸುತ್ತಿಲ್ಲ ಕುಡಿಯುವ ನೀರು ಸೇರಿದಂತೆ ದಿನನಿತ್ಯದ ಬಳಕೆಗೆ ಅಗತ್ಯವಿರುವ ನೀರು ದೊರೆಯದೆ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಈ ಕುರಿತು ತಾಲೂಕ ಪಂಚಾಯತಿ ಇ ಓ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ಶಾಶ್ವತ ಪರಿಹಾರ ದೊರತಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಇದೇ ವೇಳೆ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಜವಾಬ್ದಾರಿ ಹೊಂದಿರುವ ವಾಟರ್ ಮ್ಯಾನ್ ಗಳಾದ ಮಹೇಶ್ ಮತ್ತು ನರಸಪ್ಪ ಅವರು ಕರ್ತವ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪವು ಕೇಳು ಬರುತ್ತಿದೆ ಕರ್ತವ್ಯದ ಸಮಯದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದು, ಗೈರಾಗುವುದು ಹಾಗೂ ನೀರು ಸರಬರಾಜು ಕುರಿತು ಸಾರ್ವಜನಿಕರು ವಿಚಾರಿಸಿದಾಗ ಸಮರ್ಪಕವಾಗಿ ಸ್ಪಂದಿಸದೆ ಉಡಾಫೆಯಾಗಿ ವರ್ತಿಸುತ್ತಾರೆ ಎಂದು ಶ್ರೀಮತಿ ರಾಜಮತಿ ಬಾಲಾಜಿ ಮನವಿಯಲ್ಲಿ ತಿಳಿಸಿದ್ದಾರೆ.
ತಕ್ಷಣದ ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರ ಹಿತ ದೃಷ್ಟಿಯಿಂದ ಕೆಟ್ಟು ಹೋಗಿರುವ ಬೋರ್ವೆಲ್ ಮೋಟಾರಗಳನ್ನು ತಕ್ಷಣ ರಿಪೇರಿ ಪಡಿಸಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು ನೀರು ಸರಬರಾಜಿ ನಲ್ಲಿ ಉಂಟಾಗುತ್ತಿರುವ ಅಡಚಣೆಯ ಕಾರಣ ಪರಿಶೀಲಿಸಬೇಕು ಎಂದು ಆಗ್ರಹಿಸಲಾಗಿದೆ
ಅಲ್ಲದೆ ವಾಟರ್ ಮ್ಯಾನ್ ಗಳಾದ ಮಹೇಶ್ ಮತ್ತು ನರಸಪ್ಪ ಅವರ ಮೇಲಿನ ಆರೋಪಗಳ ಕುರಿತು ವಿಚಾರ ನಡೆಸಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಪರಿಹರಿಸಬೇಕು ಇಲ್ಲವಾದಲ್ಲಿ ಕೌಠಾ (ಬಿ.) ಗ್ರಾಮಸ್ಥರಿಂದ ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಶ್ರೀಮತಿ ರಾಜಮತಿ ಬಾಲಾಜಿ ಎಚ್ಚರಿಕೆ ನೀಡಿದ್ದಾರೆ.
ವರದಿ ಸಂಗಮೇಶ ಚಿದ್ರೆ




















