ಬೆಂಗಳೂರು: ರಾಷ್ಟ್ರೀಯ ಅಹಿಂದ ಸಂಘಟನೆ ಕರ್ನಾಟಕ ರಾಜ್ಯ ಅಹಿಂದ ಬಂಧುಗಳೇ ದಿನಾಂಕ 12.09.2026ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿದೆ ರಾಷ್ಟ್ರೀಯ ಅಹಿಂದ ಬಂಧುಗಳು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಬಂಧುಗಳು ಹಿಂದುಳಿದ ವರ್ಗದ ಬಂಧುಗಳು ದಲಿತ ಸಮೂಹ ಎಸ್ ಸಿ ಎಸ್ ಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬಂಧುಗಳು ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿ ತಾಲೂಕು ಸಮಿತಿ ಎಲ್ಲಾ ಘಟಕಗಳ ಪದಾಧಿಕಾರಿಗಳು ಸಕಾಲಕ್ಕೆ ಆಗಮಿಸಿ ಈ ನಿಮ್ಮ ರಾಷ್ಟ್ರೀಯ ಅಹಿಂದ ಸಂಘಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ನಮ್ರತೆಯಿಂದ ಕೈ ಮುಗಿದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಸೇವಕ ಬಿ ಶಿವಣ್ಣ ಎಂಎ ಎಲ್ ಎಲ್ ಬಿ. ರಾಷ್ಟ್ರೀಯ ಅಧ್ಯಕ್ಷರು. ರಾಷ್ಟ್ರೀಯ ಅಹಿಂದ ಸಂಘಟನೆ ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















