ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇವನೆಲೆಗಳು ಸಾಂಸ್ಕ್ರತಿಕವಾಗಿ ಬೆಳೆಯಬೇಕು : ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್

ಕಕ್ಕಬೆ: ಕೊಡಗಿನ ದೇವನೆಲೆಗಳು, ಹಿನ್ನಲೆಗಳು, ಸಮಾಜಗಳು ಸಾಂಸ್ಕೃತಿಕವಾಗಿ ಬೆಳೆಯಬೇಕು. ಅದಕ್ಕೆ ಸಾಹಿತ್ಯದ ಒತ್ತು ಅಗತ್ಯ, ಕೊಡವ ಸಾಹಿತ್ಯ ಅಕಾಡೆಮಿಯ ಕೊಡವ ಪುಸ್ತಕ ಪತ್ತಾಯ ಈ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು.

ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದಲ್ಲಿ ಅಕಾಡೆಮಿಯ 20ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದೇವಸ್ಥಾನಗಳಿಗೆ ಬರುವ ಭಕ್ತರು ಬಿಡುವಿನ ವೇಳೆ ಆಯಾ ಕ್ಷೇತ್ರದ ಮಹಿಮೆ, ಇತಿಹಾಸ ತಿಳಿಸುವ ಪುಸ್ತಕಗಳನ್ನು ಓದಿದರೆ ಸಾಹಿತ್ಯ-ಸಂಸ್ಕೃತಿ ಬೆಳವಣಿಗೆಗೆ ಅನುಕೂಲವಾಗುತ್ತದೆ. ದೇವನೆಲೆ ಸಮಿತಿಗಳು ಪುಸ್ತಕ ಪತ್ತಾಯ ಸ್ಥಾಪನೆಗೆ ಮುಂದೆ ಬರಬೇಕು ಎಂದು ಕರೆ ನೀಡಿದರು.

ಪತ್ತಾಯವನ್ನು ಪೂಜಾ ಕೈಂಕರ್ಯದೊಂದಿಗೆ ಉದ್ಘಾಟಿಸಿದ ಪ್ರಧಾನ ಅರ್ಚಕ ಕುಶಭಟ್, ದೇವಸ್ಥಾನದಲ್ಲಿ ಪುಸ್ತಕ ಪತ್ತಾಯ ಸ್ಥಾಪನೆ ವಿದ್ಯಾಧಾನದ ಸ್ವರೂ , ಮನೆಗಳಲ್ಲಿ ಇರುವ ಪುಸ್ತಕಗಳನ್ನು ಇಲ್ಲಿ ಸಂಗ್ರಹಿಸಿದರೆ ಓದುಗರಿಗೆ ಅನುಕೂಲವಾಗುತ್ತದೆ ಎಂದರು.

ಪತ್ತಾಯವನ್ನು ಪೂಜಾ ಕೈಂಕರ್ಯದೊಂದಿಗೆ ಉದ್ಘಾಟಿಸಿದ ಪ್ರಧಾನ ಅರ್ಚಕ ಕುಶಭಟ್, ದೇವಸ್ಥಾನದಲ್ಲಿ ಪುಸ್ತಕ ಪತ್ತಾಯ ಸ್ಥಾಪನೆ ವಿದ್ಯಾಧಾನದ ಸ್ವರೂಪ. ಮನೆಗಳಲ್ಲಿ ಇರುವ ಪುಸ್ತಕಗಳನ್ನು ಇಲ್ಲಿ ಸಂಗ್ರಹಿಸಿದರೆ ಓದುಗರಿಗೆ ಅನುಕೂಲವಾಗುತ್ತದೆ ಎಂದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಪತ್ತಾಯ ನೋಂದಣಿ ಬಾಬು ೧೦ ಸಾವಿರ ರೂ. ಚೆಕ್ ಅನ್ನು ಅಕಾಡೆಮಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಅಕಾಡೆಮಿ ವತಿಯಿಂದ ನೋಂದಣಿ ಪತ್ರ ಹಾಗೂ ದುಡಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯರಾದ ನಾಪಂಡ ಸಿ. ಗಣೇಶ, ಕುಡಿಯರ ಎಂ. ಕಾವೇರಪ್ಪ, ಪರದಂಡ ಪ್ರಿನ್ಸ್, ಪರದಂಡ ವಿಠಲ ಭೀಮಯ್ಯ, ಬಾಚಮಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಕಣಿಯಂಡ ನಾಣಯ್ಯ, ವಾಣಿ ಉತ್ತಪ್ಪ, ಉದಿಯಂಡ ಸುಭಾಷ್, ಪಾಲಂದಿರ ಜಗಜೋಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!