ವಿರಾಜಪೇಟೆ: ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 260 ರಲ್ಲಿ, ಮಾನ್ಯ ವಿರಾಜಪೇಟೆ ಶಾಸಕರಾದ ಪೊನ್ನಣ್ಣರವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಆಡಳಿತ ನಡೆಸಲಿದ್ದಾರೆ. ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಮಾನ್ಯ ಶಾಸಕ ಪೊನ್ನಣ್ಣ ರವರು ತಮ್ಮ ನೂತನ ಕಚೇರಿಗೆ ಶುಭ ಪ್ರವೇಶ ಮಾಡಿದರು.
ಶಾಸಕರ ಧರ್ಮ ಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು, ಶಾಸಕರ ಹಿರಿಯ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಮತ್ತು ಮನೆಯವರು, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಅರುಣ್ ಮಾಚಯ್ಯ, ಜಿಲ್ಲಾ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಿರಿಯ ವಕೀಲರಾದ ಚಂದ್ರಮೌಳಿ ರವರು, ಡಿಸಿಸಿ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪೊನ್ನಂಪೇಟೆಯ ಮಿದೇರಿರ ನವೀನ್, ವಿರಾಜಪೇಟೆಯ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲುವಿನ ಸೌಕತ್ ಆಲೀ ರವರು, ಅಕಾಡೆಮಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಲ್ಲಾ ವಲಯದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಲ್ಲಾ ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರಕಾರದ ನಾಮನಿರ್ದೇಶಿತ ಅಧ್ಯಕ್ಷರುಗಳು, ಸದಸ್ಯರುಗಳು,ಪದಾಧಿಕಾರಿಗಳು, ಮಹಿಳಾ ಘಟದ ಅಧ್ಯಕ್ಷರುಗಳು, ಸದಸ್ಯರುಗಳು,ಪದಾಧಿಕಾರಿಗಳು, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರುಗಳು, ಸದಸ್ಯರುಗಳು,ಪದಾಧಿಕಾರಿಗಳು, ಯುವ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಒಬಿಸಿ ಘಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಸ್ ಟಿ ಹಾಗೂ ಎಸ್ ಸಿ ಘಟದ ಅಧ್ಯಕ್ಷರುಗಳು, ಸದಸ್ಯರುಗಳು,ಪದಾಧಿಕಾರಿಗಳು, ಅಲ್ಪಸಂಖ್ಯಾತರ ಘಟದ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳು,ನೂರಾರು ಅಭಿಮಾನಿಗಳು, ಮಾನ್ಯ ಶಾಸಕರ ಸಿಬ್ಬಂದಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕ್ಷೇತ್ರದಿಂದ ಹಾಗೂ ಆಗಮಿಸಿದ ಪಕ್ಷದ ಮುಖಂಡರುಗಳು, ನೂರಾರು ಕಾರ್ಯಕರ್ತರು ಮಾನ್ಯ ಶಾಸಕರಿಗೆ ಶುಭ ಸಂದೇಶವನ್ನು ನೀಡಿದರು.
ವರದಿ : ಪ್ರಿತುನ್ ಪೂವಣ್ಣ




















