ಬೀದರ್ ಜಿಲ್ಲೆ ಔರಾದ್ ಹಾಗೂ ಕಮಲನಗರ ತಾಲೂಕಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸದಿದ್ದರೆ ಬೃಹತ್ ಹೋರಾಟ ನಡೆಸುವುದಾಗಿ ಪ್ರಭು ಬಿ ಚೌಹಾಣ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಇತ್ತೀಚಿಗೆ ಬಿಡುಗಡೆ ಮಾಡಿರುವ ಎರಡನೇ ಬರ ಪಟ್ಟಿಯಲ್ಲಿ ಔರಾದ್ ಹಾಗೂ ಕಮಲನಗರ ತಾಲೂಕುಗಳನ್ನು ಕೈ ಬಿಟ್ಟಿರೋದಕ್ಕೆ ಶಾಸಕ ಪ್ರಭು ಚೌಹಾಣ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಮಾನದಂಡಗಳ ಪ್ರಕಾರವೇ ಕಳೆದ ಮೂರು ವಾರಗಳಿಂದ ಈ ಭಾಗದಲ್ಲಿ ಮಳೆಯಾಗಿಲ್ಲ ಬೆಳೆಗಳು ಒಣಗಿಹೇಗಿವೆ ಎಂದು ಹೇಳಿದ್ದಾರೆ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದ ಅವರು ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಒಂದು ವಾರದೊಳಗೆ ಔರಾದ ಮತ್ತು ಕಮಲನಗರ ಎರಡೂ ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಆಗ್ರಹಿಸಿದ್ದಾರೆ ಈ ಕುರಿತು ಹಲವು ಭಾರಿ ಮನವಿ ಸಲ್ಲಿಸಿದರು ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಹೀಗಾಗಿ ರೈತಕ್ಕಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
ವರದಿ ಸಂಗಮೇಶ ಚಿದ್ರೆ




















