ಮಧುಗಿರಿ: ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ಜಿ.ಎನ್. ಅವರು ಮಂಡಿಸಿದ “ An Economic Analysis of Production and Marketing of Contract Farming of Vegetables under Contract Farming in Karnataka ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ.
ಮಧುಗಿರಿ ತಾಲ್ಲೂಕಿನ ಗರಣಿ ಗ್ರಾಮದ ನಾರಾಯಣಪ್ಪ ಹಾಗೂ ಭಾಗ್ಯಮ್ಮ ದಂಪತಿಯ ಪುತ್ರರಾದ ಕೃಷ್ಣಮೂರ್ತಿ ಅವರು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಕೃಷ್ಣಮೂರ್ತಿ ಅವರು ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, 15ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ರಚಿಸಿದ್ದಾರೆ. ಅಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿ ಮಾರ್ಗದರ್ಶನ ಮಾಡಿದ್ದಾರೆ.
ಗ್ರಾಮೀಣ ಹಿನ್ನೆಲೆಯಿಂದ ಬಂದು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೃಷ್ಣಮೂರ್ತಿ ಅವರ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ವಿದ್ಯಾರ್ಥಿಗಳು ಹಾಗೂ ಗರಣಿ ಗ್ರಾಮದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ:ರಂಗರಾಜು ಎಂ. ಗರಣಿ




















