ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ

ಬಳ್ಳಾರಿ : ಪ್ರಸಕ್ತ ವರ್ಷದ ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಸೂಕ್ಷ್ಮ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಕಂಪ್ಲಿ ಪೊಲೀಸ್ ಠಾಣಾ ಸರಹದ್ದಿನ ನಂ.15 ಗೋನಾಳ ಹಾಗೂ ನಂ.10 ಮುದ್ದಾಪುರ ಗ್ರಾಮಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿದ್ದರು.

ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಮೇಲ್ಕಂಡ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಲ್ಲದೆ, ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೂ ಅವಕಾಶ ಇರುವುದಿಲ್ಲ. ನಿಷೇಧಿತ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಜನಸಂದಣಿ ಸೇರುವುದನ್ನು ಸಹ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!