ಬಳ್ಳಾರಿ / ಕಂಪ್ಲಿ : ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ಇದೇ ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಪ್ರಭಾರಿ ಉಪ ತಹಶೀಲ್ದಾರ್ ರಮೇಶ್ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್ ಕಛೇರಿಯಲ್ಲಿ ನಡೆಯಲಿರುವ ಈ ಸೌಹಾರ್ದಯುತ ಕಾರ್ಯಕ್ರಮದಲ್ಲಿ ಆನೆಗುಂದಿ ಮೂಲ ಸಂಸ್ಥಾನದ ಸರಸ್ವತಿ ಪೀಠದ ಶ್ರೀ ವಿಶ್ವಕರ್ಮ ಜಗದ್ಗುರು ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಸ್ಥಳೀಯ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ಸಮಾಜದ ಪ್ರಮುಖ ಗೌರವಾನ್ವಿತರಿಗೆ ಗೌರವ ಸನ್ಮಾನವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ವಿಶ್ವಕರ್ಮ ಸಮಾಜದ ಅಧ್ಯಕ್ಷ ಡಿ.ರುದ್ರಪ್ಪ ಆಚಾರ್, ಪ್ರಧಾನ ಮುಖಂಡರಾದ ಎಂ.ಮಂಜುನಾಥ, ಗುರುಮೂರ್ತಿ ಆಚಾರ್, ಅಣ್ಣಿಗೇರಿ ವೀರಭದ್ರ ಆಚಾರ್, ನೀಲಕಂಠಾಚಾರ್, ಗಣೇಶ್ ಆಚಾರ್, ಚಂದ್ರಶೇಖರ ಆಚಾರ್, ನಾರಾಯಣ, ಮೆಟ್ರಿ ಷಣ್ಮುಖ, ರಾಘವೇಂದ್ರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಕಛೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















