ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ವ್ಯತ್ಯಯದಿಂದ ನಿಟ್ಟೂರ ಸುತ್ತಮುತ್ತ ರೈತರ ಪರದಾಟ

ಅಧಿಕಾರಿಗಳು ಸಮಸ್ಯೆ ಪರಿಹರಿಸುವಂತೆ ರೈತರ ಮನವಿ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ.) ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆಯ ಅಭಾವದಿಂದ ಈಗಾಗಲೇ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರುಣಿಸಲು ಸಾಧ್ಯವಾಗದೆ ರೈತರು ಪರದಾಡುವಂತಾಗಿದೆ.
ಈ ಕುರಿತು ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಗಮನಹರಿಸಿ, ನಿಟ್ಟೂರ (ಬಿ) ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಗ್ರಾಮಸ್ಥರು ಮತ್ತು ರೈತರಾದ ಶಾಲಿವನ ಪಾಟೀಲ, ವಸಂತ ಮನಕಾರಿ, ಕಾಡಾಜಿರಾವ ವೈಜೆ, ಮಲ್ಲಾರಿ ಕಡಾಳೆ ಚಂದ್ರಕಾಂತ ಪಾಟೀಲ,ಅಂಕೋಶ ಕಾಮಯನೋರ,ಉಮೇಶ ಜಿತಪ್ಪ, ವಿಶ್ವನಾಥ ಖಜಾಪುರೆ, ಸಿದ್ದಪ್ಪ ಚಿಮಕೋಡೆ,ಬಸವರಾಜ ಜೋನೇಕೆರೆ ಸೇರಿದಂತೆ ಅನೇಕ ರೈತರು ಮನವಿ ಮಾಡಿದ್ದಾರೆ.

ವರದಿಗಾರರು ಗಜಾನoದ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!