ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಚ್ಛತಾ ಜಾಗೃತಿಗೆ ಬಾಲಕಿಯರ ಹೆಜ್ಜೆ

ಸಿರುಗುಪ್ಪ: ಸ್ವಚ್ಛತೆಯ ಮಹತ್ವವನ್ನು ಸಾರುವ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಉದ್ದೇಶದಿಂದ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವತಿಯಿಂದ ‘ಸ್ವಚ್ಛತಾ ಹೀ ಸೇವಾ 2026’ ಅಭಿಯಾನದಡಿ ಸ್ವಚ್ಛತಾ ಜಾಥಾ ಹಮ್ಮಿಕೊಳ್ಳಲಾಯಿತು.

ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದ ಜಾಥಾ ಬಸ್ ನಿಲ್ದಾಣ, ಮುಖ್ಯ ಬೀದಿ ಸೇರಿದಂತೆ ಪಟ್ಟಣದ ವಿವಿಧ ಪ್ರಮುಖ ಪ್ರದೇಶಗಳಲ್ಲಿ ನಡೆಯಿತು. ಸ್ವಚ್ಛತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿನಿಯರು ಅಭಿಯಾನಕ್ಕೆ ಕಳೆ ತಂದರು.

ಸ್ವಚ್ಛತೆ ನಮ್ಮೆಲ್ಲರ ಹೊಣೆ : ಪಟ್ಟಣದ ಸ್ವಚ್ಛತೆ ಕಾಪಾಡುವುದು ಕೇವಲ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ನಿಗದಿತ ಸ್ಥಳದಲ್ಲಿ ಹಾಕುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂಬ ಸಂದೇಶವನ್ನು ಜಾಥಾದಲ್ಲಿ ಸಾರಲಾಯಿತು.

ಶಾಲಾ ಮಕ್ಕಳ ಭಾಗವಹಿಸುವಿಕೆಯಿಂದ ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರ ಗಮನ ಸೆಳೆಯಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಹಾಗೂ ಸ್ವಚ್ಛತಾ ಜವಾಬ್ದಾರಿಯ ಅರಿವು ಮೂಡಿಸುವ ನಿಟ್ಟಿನಲ್ಲಿಯೂ ಕಾರ್ಯಕ್ರಮ ಮಹತ್ವ ಪಡೆದಿತು.

ಜಾಥಾದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಗೂ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಅನ್ನಪೂರ್ಣ, ಕಮ್ಯುನಿಟಿ ಮೊಬೈಲೈಸರ್‌ಗಳಾದ ರೇಷ್ಮ, ಹುಲಿಗೆಮ್ಮ, ಹಸನ್ ಸಾಬ್ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್ ,ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!