ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೀಪ ಬೆಳಗಿಸಿ ಮೋದಿ ಹುಟ್ಟುಹಬ್ಬ ಆಚರಣೆ

ರುದ್ರಮ್ಮ ಅನಾಥಾಶ್ರಮಕ್ಕೆ ಅಡುಗೆ ಸಾಮಗ್ರಿ ವಿತರಣೆ : ಸಿಹಿ ಹಂಚಿ ಸಂಭ್ರಮ

ಕೊಟ್ಟೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕೊಟ್ಟೂರು ಮಂಡಲ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಭ್ರಮಿಸಲಾಯಿತು.

ಪಟ್ಟಣದ ಶ್ರೀ ಗುರುಕೊಟ್ಟೂರೇಶ್ವರ ದೇವಸ್ಥಾನದಲ್ಲಿ ದೀಪ ಬೆಳಗಿಸಿ, ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅವರಿಗೆ ಶುಭಾಶಯ ಕೋರಲಾಯಿತು. ಬಳಿಕ ಅಮ್ಮನತಾಶ್ರಮಕ್ಕೆ ಅಗತ್ಯ ಅಡುಗೆ ಸಾಮಗ್ರಿಗಳನ್ನು ವಿತರಿಸಿ, ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರ ಆಡಳಿತಾವಧಿಯ ಸಾಧನೆಗಳು ಹಾಗೂ ದೇಶದ ಅಭಿವೃದ್ಧಿಗಾಗಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಪಾಟೀಲ್ ಕಲ್ಲೇಶ್ ಕೊಟ್ಟೂರು, ಕೊಟ್ಟೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ .ಚಿರಬಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿದ್ದಯ್ಯ, ಮಂಡಲ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಚಾಲುಕ್ಯ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಮರಬದ ಕೊಟ್ರೇಶ್, ಮಂಡಲ ರೈತ ಮೋರ್ಚಾ ಉಪಾಧ್ಯಕ್ಷ ಕೊನಪುರ್ ಬಸವರಾಜ್, ನಗರ ಘಟಕದ ಕಾರ್ಯದರ್ಶಿ ಬಸವರಾಜ್, ಕೋಡಿಹಳ್ಳಿ ವೀರೇಶ್, ಕೊಟ್ರೇಶಪ್ಪ ಮೇಷ್ಟ್ರು, ಬಂದಾತರ ಸುರೇಶ್, ತಿಪ್ಪಜ್ಜಿ ವೀರೇಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!