ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗಿನ ಶಾಸಕದ್ವಯರಿಂದ ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿಯರ ಆರೈಕೆ ಕೇಂದ್ರದ ಉದ್ಘಾಟನೆ

ವಿರಾಜಪೇಟೆ: ಮೈಸೂರಿನಲ್ಲಿ ನೂತನವಾಗಿ ಆರಂಭಗೊಂಡ ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಭಾಗವಹಿಸಿ ನೂತನ ಕೇಂದ್ರಕ್ಕೆ ಶುಭ ಹಾರೈಸಿದರು.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಈ ಆರೋಗ್ಯ ಕೇಂದ್ರವು ಆರಂಭಗೊಂಡಿದ್ದು, ಕೆಪಿಸಿಸಿ ಸದಸ್ಯರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬೇಕಲ್ ರಮನಾಥ್ ಅವರ ಪುತ್ರ ಡಾ. ಅಮರನಾಥ್ ಬೇಕಲ್ ಹಾಗೂ ಅವರ ಪತ್ನಿ ಡಾ. ಮೇರ್ಲಿನ್ ಅವರ ಒಡೆತನದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಕೇಂದ್ರದಲ್ಲಿ ಸಂಪೂರ್ಣ ಆಯುರ್ವೇದ ಚಿಕಿತ್ಸಾ ಪದ್ಧತಿಯೊಂದಿಗೆ ಪಂಚಕರ್ಮ ಚಿಕಿತ್ಸೆಗಳು ಹಾಗೂ ವಿಶೇಷ ಬಾಣಂತಿ ಆರೈಕೆ ಸೇವೆಗಳು ಲಭ್ಯವಿರಲಿವೆ ಎಂದು ಕೇಂದ್ರದ ಮಾಲೀಕರು ಈ ಸಂದರ್ಭ ತಿಳಿಸಿದರು.
ನೂತನ ಆರೋಗ್ಯ ಕೇಂದ್ರದ
ಉದ್ಘಾಟನೆಗೆ ಶುಭ ಕೋರಿದ ಶಾಸಕರು, ಈ ಕೇಂದ್ರವು ಯಶಸ್ವಿಯಾಗಿ ಮುನ್ನಡೆಯಲಿ ಹಾಗೂ ಸ್ಥಳೀಯ ಜನರಿಗೆ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆಗಳು ಮತ್ತಷ್ಟು ಸುಲಭವಾಗಿ ದೊರೆಯುವಂತಾಗಲಿ ಎಂದು ಹಾರೈಸಿದರು.

ಪಾರಂಪರಿಕ ಆಯುರ್ವೇದ ಜ್ಞಾನವನ್ನು ಆಧುನಿಕ ಆರೋಗ್ಯ ಸೇವೆಯೊಂದಿಗೆ ಸಂಯೋಜಿಸಿ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರ ಆರಂಭಗೊಂಡಿದೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!