ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಮಳೆ ಕೊರತೆಯಿಂದ ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿರುವ ಸೋಯಾಬಿನ್ ಹಾಗೂ ತೊಗರಿ ಬೆಳೆಗಳು ಮಳೆ ಇಲ್ಲದ ಬಿಸಿಲಿನ ತಾಪಕ್ಕೆ ಬಾಡುತ್ತಿವೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಕೈಕೊಟ್ಟಿರುವುದರಿಂದ ಬೆಳೆಗಳು ಒಣಗಿರುವ ಹಂತಕ್ಕೆ ತಲುಪಿವೆ. ಬಿತ್ತನೆ ಬೀಜ,ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ರೈತರು ಮಾಡಿರುವ ಖರ್ಚು ಕೂಡ ವಾಪಸ್ ಬರುವ ಸ್ಥಿತಿ ಇಲ್ಲದಂತಾಗಿದೆ ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಸರ್ಕಾರ ಕೂಡಲೇ ಅವಳಿ ತಾಲೂಕಿನಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿ ತಾಲೂಕಿನ ಬರೆಪೀಡಿತ ಪ್ರದೇಶವೆಂದು ಘೋಷಿಸಬೇಕು ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಅಗತ್ಯ ನೆರವು ಒದಗಿಸಬೇಕೆಂದು ಯುವ ರೈತ ವಿಜಯಕುಮಾರ್ ಎನ್ಕೆಮರೆ ಒತ್ತಾಯಿಸಿದ್ದಾರೆ.
ವರದಿ ಸಂಗಮೇಶ ಚಿದ್ರೆ




















