ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಳಿಕೋಟೆಯಲ್ಲಿ ಪ್ರಜಾಸೇವೆ ಆಂದೋಲನಾ ಸಭೆ

ತಾಳಿಕೋಟೆ : ಕರ್ನಾಟಕ ಸರ್ಕಾರದ ಹೊಸ ಯೋಜನೆ ಪ್ರಜಾಸೇವೆ ಆಂದೋಲನ ಸಭೆಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಶ್ರೀ ಖಾಸ್ಗತೇಶ್ವರ ಸಭಾಭವನದಲ್ಲಿ ದಿನಾಂಕ 19 -9 -2026 ರಂದು ಹಮ್ಮಿಕೊಳ್ಳಲಾಗಿತ್ತು.
ತಹಶೀಲ್ದಾರ್ ಮಲ್ಲಿಕಾರ್ಜುನ ಎಸ್. ಅರಿಕೇರಿ ಅವರು ಸ್ವಾಗತವನ್ನು ಭಾಷಣವನ್ನು ನೆರವೇರಿಸಿದರು.
ನಂತರ ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರಿಯ ಶಾಸಕರುಗಳಾದ ಶ್ರೀ ಮಾನ್ಯ ಸಿ ಎಸ್ (ಅಪ್ಪಾಜಿ) ನಾಡಗೌಡ ಅವರು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮುಖಾಂತರ ಉದ್ಘಾಟಿಸಿ ಪ್ರಜಾ ಸೇವೆ ಆಂದೋಲನದಿಂದ ತಕ್ಷಣವೇ ಪರಿಹಾರ ಸಿಗುವ ಕುರಿತು ಅಧ್ಯಕ್ಷೀಯ ಭಾಷಣವನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ತಾಳಿಕೋಟೆ ತಾಲೂಕಿನ ಅಧಿಕಾರಿ ವೃಂದವು ಈ ವೇದಿಕೆಯನ್ನು ಹಂಚಿಕೊಂಡಿದ್ದರು.
ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ,ಸ್ಥಳೀಯ ಪುರಸಭೆ ಮಾಜಿ ಸದಸ್ಯರುಗಳು ಮತ್ತು ತಾಲೂಕಿನ ಗ್ರಾಮಗಳ ರೈತರು, ಸಂಘಟನೆಗಳ ಕಾರ್ಯಕರ್ತರು,ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಸರ್ವರಿಗೂ ಅಧಿಕಾರಿ ವೃಂದ ಧನ್ಯವಾದಗಳನ್ನು ಸಲ್ಲಿಸಿದರು.
ಕಟ್ಟಡ ಕಾರ್ಮಿಕರಿಗೆ ಸರಕಾರದ ವತಿಯಿಂದ ಕಾರ್ಮಿಕರ ಸುರಕ್ಷತೆಯ ಕಿಟ್ಟನ್ನು ವೇದಿಕೆ ಮೇಲೆ ಹಂಚಲಾಯಿತು.
ಇದು ಸರಕಾರದ ಯೋಜನೆ ಉಚಿತವಾಗಿರುತ್ತದೆ ಎಂದು ತಹಶೀಲ್ದಾರ್ ಅವರು ಹೇಳಿದರು.

ವರದಿಗಾರರು ಸಂಗಮೇಶ ಸಿ ಚೌದ್ರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!