ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಣಪತಿ ವಿಸರ್ಜನೆ ವೇಳೆ ಗಲಾಟೆ – ದಲಿತ ಯುವಕ ಸಾವು : ಪೊಲೀಸ್ ಠಾಣೆ ಮುಂದೆ ದಲಿತ ಸಂಘಟನೆಗಳ ಧರಣಿ

ಮಧುಗಿರಿ, (ಕಸಾಪುರ): ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕಸಾಪುರ ಗ್ರಾಮದ ಬಂಡೆಕುಂಟೆ ಮಾರುತೇಶ್ (24) ಮತ್ತು ಸಿಂಹಾದ್ರಿ (17) ನಡುವೆ ಗಲಾಟೆ ನಡೆದು ಸಿಂಹಾದ್ರಿ ಮೃತಪಟ್ಟಿದ್ದಾನೆ.
ದಲಿತರ ಕಾಲೋನಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ವಿಸರ್ಜನೆಗೆ ಕೊಂಡೊಯ್ಯುವಾಗ ಗ್ರಾಮದಲ್ಲಿ ವಿಸರ್ಜನಾ ಮಹೋತ್ಸವ ನಡೆಯುತ್ತಿದ್ದ ವೇಳೆ ಇಬ್ಬರು ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾರುತೇಶ್ ಸಿಂಹಾದ್ರಿಯನ್ನು ತಳ್ಳಿದಾಗ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗಾಯಾಳುವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹವನ್ನು ಶವಪರೀಕ್ಷೆಗೆ ಇಡಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಂತರ ಯುವಕರ ಸಹಕಾರದೊಂದಿಗೆ ಗಣಪತಿಯನ್ನು ವಿಸರ್ಜಿಸಲಾಯಿತು.

ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸ್ ಠಾಣೆ ಮುಂದೆ ಧರಣಿ :

ಸಿಂಹಾದ್ರಿ ಸಾವಿಗೆ ನ್ಯಾಯ ಒದಗಿಸಬೇಕು, ಕೊಲೆ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಿಡಿಗೇಶಿ ಪೊಲೀಸ್ ಠಾಣೆ ಮುಂಭಾಗ ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮೃತ ಸಿಂಹಾದ್ರಿ ತಾಯಿ ಅನ್ನಪೂರ್ಣಮ್ಮ, ಅಂಬೇಡ್ಕರ್ ದಂಡೋರದ ಕುಮಾರ್, ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷ ರಾಮಾಂಜಿನಪ್ಪ ತೊಂಡೊಟಿ, ಬಿಜೆಪಿ ಮಧುಗಿರಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಮಾದರ ಮಹಾಸಭಾ ಖಜಾಂಚಿ ರಮೇಶ್ ಎಸ್.ಆರ್, ಜೆಸಿಬಿ ವೆಂಕಟೇಶ್, ದೊಡ್ಡ ಹೊಸಹಳ್ಳಿ ಮೂರ್ತಿ ಸೇರಿದಂತೆ ಹಲವು ದಲಿತ, ಮಾದಿಗ ಮುಖಂಡರು ಉಪಸ್ಥಿತರಿದ್ದರು.

ವರದಿ: ರಂಗರಾಜು ಎಂ. ಗರಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!