ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೆಚ್ಚುವರಿ ಕೆಲಸದಿಂದ ಮುಕ್ತಿ ನೀಡಿ, ಅಂಗನವಾಡಿಯಲ್ಲೇ ಕರ್ತವ್ಯ ನಿರ್ವಹಿಸಲು ಕಾರ್ಯಕರ್ತೆಯರಿಗೆ ಅನುವು ಮಾಡಿಕೊಡಿ : ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ

ಬಳ್ಳಾರಿ / ಕಂಪ್ಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಅನಗತ್ಯ ಕೆಲಸ ನೀಡಿ ಅಂಗನವಾಡಿ ಕೇಂದ್ರದ ಗುಣಮಟ್ಟ ಕಡಿಮೆ ಮಾಡಲು ಹೊರಟಿವೆ. ಆದ್ದರಿಂದ ಕೂಡಲೇ ಹೆಚ್ಚುವರಿ ಕೆಲಸದಿಂದ ಮುಕ್ತಿ ನೀಡಿ, ಅಂಗನವಾಡಿಯಲ್ಲೇ ಸೇವೆ ಮಾಡಲು ಅನುವು ಮಾಡಿಕೊಡಬೇಕು ಮತ್ತು ಇಲ್ಲಿನ ಕಾರ್ಯಕರ್ತೆಯರ, ಸಹಾಯಕಿಯರ ಬಹು ದಿನಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಹೇಳಿದರು.

ಪಟ್ಟಣದ ಶಿಬಿರದಿನ್ನಿ (ಮಾರುತಿ ನಗರ)ಯ ಪುರಸಭೆ ಸಮುದಾಯ ಭವನದಲ್ಲಿ ಅಂಗನವಾಡಿ ನೌಕರರ ಖಾಯಂಮಾತಿ ಮತ್ತು ಕನಿಷ್ಠ ವೇತನ ವ್ಯಾಪ್ತಿಗೆ ತರುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು)ದ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ 10ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಲವು ವರ್ಷಗಳಿಂದ ಅಂಗನವಾಡಿ ಕೇಂದ್ರದ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ ಬಂದಿರುವ ಅಂಗನವಾಡಿ ನೌಕರರನ್ನು ಖಾಯಂಗೊಳಿಸಿ, ಕನಿಷ್ಠ ನೀಡಬೇಕು. ಅನೇಕ ವರ್ಷಗಳಿಂದ ಅಂಗನವಾಡಿ ಕೇಂದ್ರದ ಉಳಿವಿಗಾಗಿ ಮತ್ತು ಮಕ್ಕಳ ಪೌಷ್ಠಿಕತೆ ಜೊತೆಗೆ ಶಿಕ್ಷಣ ನೀಡುತ್ತಾ ಬರಲಾಗಿದೆ. ಆದರೆ, ರಾಜ್ಯ, ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕೇಂದ್ರದ ಅನುದಾನ ಹೆಚ್ಚಳವಾಗಿಲ್ಲ. ಮತ್ತು ಮಕ್ಕಳಿಗೆ ಅನುದಾನದ ಕೊರತೆ ಕಾಡುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಸದೃಢ ಪ್ರಜಾಪ್ರಭುತ್ವ ಕಟ್ಟುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ದೊಡ್ಡದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮಕ್ಕಳಿಗೆ ನೀಡುತ್ತಿರುವ ಪೌಷ್ಠಿಕ ಆಹಾರ, ಅನುದಾನ ಸಮರ್ಪಕವಾಗಿ ಒದಗಿಸುತ್ತಿಲ್ಲ. ಆದ್ದರಿಂದ ಡಿಸೆಂಬರ್ 1ರಂದು ದೆಹಲಿ ಚಲೋ ಬೃಹತ್ ಪ್ರತಿಭಟನಾ ಹೋರಾಟಕ್ಕೆ ಸಜ್ಜಾಗಿದ್ದೇವೆ. ಕೇಂದ್ರದ ನಡೆ ಖಂಡಿಸಿ ಚಳುವಳಿಗೆ ನಾಂದಿಯಾಗುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದರು. ಇಲ್ಲಿನ ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಆಲಿಸಿ ಮುಂದಿನ ಹೋರಾಟದ ದಿಟ್ಟ ಹೆಜ್ಜೆಯೊಂದಿಗೆ ಬೃಹತ್ ಹೋರಾಟಕ್ಕೆ ಮುನ್ನುಡಿ ಬರೆಯೋಣ ಎಂಬ ಸುದೇಶದ ಜೊತೆಗೆ ಅಂಗನವಾಡಿ ಕೇಂದ್ರದ ಮೂಲಭೂತ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಸತ್ಯಬಾಬು, ಜಿಲ್ಲಾಧ್ಯಕ್ಷ ಹೆಚ್.ತಿಪ್ಪಯ್ಯ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಉಮಾದೇವಿ, ಕಾರ್ಯದರ್ಶಿ ಎ.ಮಲಮ್ಮ, ಹಮಾಲರ ಸಂಘದ ಅಧ್ಯಕ್ಷ ಓಬಳೇಶ, ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಂತೋಷಕುಮಾರ. ಸಿಐಟಿಯು ಗೌರವಾಧ್ಯಕ್ಷ ಬಂಡಿ ಬಸವರಾಜ, ಅಂಗನವಾಡಿ ನೌಕರರ ಸಂಘದ ಕಂಪ್ಲಿ ತಾಲೂಕು ಅಧ್ಯಕ್ಷ ಬಿ.ಕೆ.ಉಮಾದೇವಿ, ಕಾರ್ಯದರ್ಶಿ ತಿಪ್ಪಮ್ಮ, ಖಜಾಂಜಿ ಅನುರಾಧ, ಶಾಂತ, ಸಹ ಕಾರ್ಯದರ್ಶಿಗಳಾದ ನಾಜೀರಾ, ನಾಗಮ್ಮ ಮುಖಂಡೆ ಜೈರಾಬೀ, ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಎಲ್.ಹೊನ್ನೂರಸಾಬ್, ಮುಖಂಡ, ನಾಗರಾಜ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!