ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿ ಮತ್ತು ಕುಶಾಲನಗರ ಬರಪೀಡಿತ ತಾಲೋಕುಗಳೆಂದು ಘೋಷಣೆ : ಶಾಸಕ ಮಂತರ್ ಗೌಡ

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಮಡಿಕೇರಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಪರಿಗಣಿಸಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ಅನಾವೃಷ್ಟಿಯಿಂದ ಜನ, ಜಾನುವಾರು ಮತ್ತು ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು ಅವರ ನೆರವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ತಾಲೂಕಿನ ಜನತೆ ಆತಂಕಕ್ಕೆ ಒಳಗಾಗಬಾರದು, ಸರ್ಕಾರ ನಿಮ್ಮ ಜೊತೆಗಿದೆ ಎಂದು ಅವರು ಅಭಯ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಮಾನದಂಡದ ಅನುಸಾರ ಬರಪೀಡಿತ ಜಿಲ್ಲೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ನೆರವು ನೀಡಲಿವೆ. ಕೇಂದ್ರ ಸರ್ಕಾರ ತಡ ಮಾಡದೆ ಕರ್ನಾಟಕದ ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ (NDRF) ಯಿಂದ ಅನಾವೃಷ್ಟಿ ಪರಿಹಾರ ಅನುದಾನ ನೀಡಬೇಕು. ಬರಪೀಡಿತ ರೈತರ ನೆರವಿನ ಹೊಣೆ ರಾಜ್ಯದ್ದಷ್ಟೇ ಕೇಂದ್ರದ್ದೂ ಆಗಿದೆ ಎಂದು ಶಾಸಕರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಶೀಘ್ರವೇ ರಾಜ್ಯಕ್ಕೆ NDRF ನಿಧಿ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ. ಮಂತ‌ರ್ ಗೌಡ ಒತ್ತಾಯಿಸಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!