
ಕೊಪ್ಪಳ : ಯಲಬುರ್ಗಾ ತಾಲೂಕಿನ ತಳಬಾಳ ನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್. ಎಸ್.ಎಸ್.ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರೂ ಆದ ಶ್ರೀಮತಿ ನಾಗರತ್ನ ತಮ್ಮಿನಾಳ ಅವರು ಸಸಿಗಳಿಗೆ ನೀರೆರೆಯುವ ಮೂಲಕ, ಇವತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ, ಪರಸರವನ್ನು ರಕ್ಷಿಸಲು ಸಿಗಳನ್ನು ನೆಟ್ಟು, ಅವುಗಳ ಆರೖಕೆ ಮಾಡಿದರೆ ಅವು ನಮ್ಮನ್ನು ರಕ್ಷಿಸುತ್ತವೆ, ಆದ್ದರಿಂದ ಕಾಡನ್ನು ಬೆಳೆಸಿ, ನಾಡನ್ನು ಉಳಿಸುವ ಸಂಕಲ್ಪ ಮಾಡೋಣ, ಎಂದು, ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜಿನ ಉಪನ್ಯಾಸಕರಾದ ಸಂಗಪ್ಪ ಬ್ಯಾಳಿ,ಲಕ್ಮಣ ಹುಲ್ಲೂರ,ಬೀರಪ್ಪ , ವಾಲಿಕಾರ, ಜಮಲ್ ಸಾಬ್, ಬಸನಗೌಡ ಹಾಗೂ ಇತರ ಸಿಬ್ಬಂದಿ ವರ್ಗದವರು, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
- ಕರುನಾಡ ಕಂದ ಸುದ್ದಿ




















