ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಮಂಗಲ ನಾಲ್ಕೇರಿ ಸಂಪರ್ಕಿಸುವ ೧ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎ. ಎಸ್. ಪೊನ್ನಣ್ಣ

ಪೊನ್ನಂಪೇಟೆ : ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯು ರೂ. 1 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಕೈಗೊಂಡರು.

ಈ ಭಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಪ್ರತಿದಿನ ನೂರಾರು ಜನರು ಹಾಗೂ ವಾಹನಗಳು ಸಂಚರಿಸುವ ಈ ಭಾಗದ ರಸ್ತೆಯನ್ನು ಉತ್ತಮ ಗುಣಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಉತ್ತಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವುದು ತನ್ನ ಹಾಗೂ ಸರಕಾರದ ಉದ್ದೇಶ ಎಂದು ತಿಳಿಸಿದರು. ಶೀಘ್ರದಲ್ಲೇ ಈ ಕಾಮಗಾರಿಗಳು ಪ್ರಾರಂಭವಾಗಲಿದ್ದು, ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಉತ್ತಮ ರಸ್ತೆ ನಿರ್ಮಿಸುವಂತಹ ಆಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಡ ಪ್ರಶಾಂತ್, ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಡ ಲಾಲಾ ಅಪ್ಪಣ್ಣ, ನಾಲ್ಕೇರಿ ವಲಯ ಅಧ್ಯಕ್ಷರಾದ ತಿತೀರ ಕಟ್ಟಿ ಕಾರ್ಯಪ್ಪ, ಟಿ ಶೆಟ್ಟಿಗೇರಿ ವಲಯ ಅಧ್ಯಕ್ಷರಾದ ತಿತೀರ ಪ್ರಭು, ಶ್ರೀಮಂಗಲ ವಲಯ ಅಧ್ಯಕ್ಷರಾದ ಪಾಲ್ವಿನ್ ಪೂಣಚ್ಚ, ಕೆ ಬಾಡಗ ವಲಯ ಅಧ್ಯಕ್ಷರು ಚಿಮ್ಮಣ್ಣಮಾಡ ರವಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಪಿಕೆ ಪೊನ್ನಪ್ಪ, ಡಿಸಿಸಿ ಸದಸ್ಯರಾದ ಪೆಮ್ಮಂಡ ರಾಜ, ಪಕ್ಷದ ಮುಖಂಡರಾದ ಮೋಟಯ್ಯ, ವಿಶು, ಉದಯ, ಕಟ್ಟೇರ ಗಣೇಶ, ಅಭಿನ್, ಸುಧೀರ್, ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!