ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾರತವನ್ನು ಮಲೇರಿಯ ಮುಕ್ತಗೊಳಿಸುವ ಗುರಿ: ಕೇಂದ್ರ ತನಿಖಾ ತಂಡ ಕೊಡಗಿಗೆ ಭೇಟಿ.

ಮಡಿಕೇರಿ‌: 2030ರ ವೇಳೆಗೆ ದೇಶದಲ್ಲಿ ಮಲೇರಿಯಾ ಪ್ರಕರಣಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಭಾಗವಾಗಿ, ಸಬ್ ನ್ಯಾಷನಲ್ ಮಲೇರಿಯಾ ಎಲಿಮಿನೇಷನ್ ವ್ಯಾಲಿಡೇಶನ್ (SNMEV) ರಾಷ್ಟ್ರೀಯ ತಂಡ ಕೊಡಗು ಜಿಲ್ಲೆಗೆ ಮೂರು ದಿನಗಳ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸೋಮವಾರಪೇಟೆ ತಾಲೂಕು ಆಸ್ಪತ್ರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ, ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಂಟಿಕೊಪ್ಪ ಉಪಕೇಂದ್ರ, ಮಡಿಕೇರಿ ತಾಲೂಕಿನ ನಗರ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿತು. ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಕೈಗೊಳ್ಳಲಾಗಿರುವ ಕ್ರಮಗಳು, ರೋಗಿಗಳ ಚಿಕಿತ್ಸಾ ಅನುಸರಣೆ ಮತ್ತು ದಾಖಲಾತಿ ನಿರ್ವಹಣೆಯನ್ನು ತಂಡ ಪರಿಶೀಲಿಸಿತು.
ದೆಹಲಿಯ ಡಾ. ಕಲ್ಪನಾ ಬರುವ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಕೇಂದ್ರ ತಂಡದ ಡಾ. ಆರ್. ತೇನಾಂಬಿಗೆ, ಡಾ. ಬಿಜೇತ್ ಬಿಸ್ವಾ ಹಾಗೂ ಡಾ. ಶ್ಯಾಮ್ ಬಂದು ರಾತ್ ಅವರು ತಂಡದಲ್ಲಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಬಿ.ಎಲ್., ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಇಂದೂಧರ್, ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುನಿಲ್, ಜಿಲ್ಲಾ ಎಂಟಮಾಲಜಿಸ್ಟ್ ಮಂಜುನಾಥ್, ಜಿಲ್ಲೆಯ NVBDCP ತಂಡದ ಸದಸ್ಯರು, ವಿವಿಧ ಆರೋಗ್ಯ ಸಂಸ್ಥೆಗಳ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉತ್ತಮ ನಿರ್ವಹಣೆ ಕಂಡುಬಂದಿದೆ ಎಂದು ತಂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೆಲವು ಸಣ್ಣಪುಟ್ಟ ನಿರ್ವಹಣಾ ಅಂಶಗಳನ್ನು ಸರಿಪಡಿಸಿಕೊಳ್ಳುವಂತೆ ಸಲಹೆ ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಎಂ. ಸತೀಶ್ ಕುಮಾರ್ ತಿಳಿಸಿದ್ದಾರೆ.

ಪರಿಶೀಲನೆ ಅಂತ್ಯದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ವತಿಯಿಂದ ಕೇಂದ್ರ ತಂಡದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!