ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗಿನ ಇಬ್ಬರು ಶಿಕ್ಷಕರಿಗೆ ವಿದ್ಯಾರತ್ನ ರಾಜ್ಯ ಪ್ರಶಸ್ತಿ.

ವಿರಾಜಪೇಟೆ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು.) ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಯಲಿಯಂಗಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಎಂ. ಎಸ್. ಹಾಗೂ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಇಬ್ಬರೂ ಶಿಕ್ಷಕರಿಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಪದ್ಮಾ ಹೆಚ್.ಎನ್., ಜಿಲ್ಲಾ ಸಂಚಾಲಕ ಲೋಕೇಶ, ಜಿಲ್ಲಾ ಕಾರ್ಯಾಧ್ಯಕ್ಷೆ ಜಯಮಾಲಾ ಹಾಗೂ ತಾಂತ್ರಿಕ ಸಲಹೆಗಾರರಾದ ಕಮರುನ್ನೀಸ ಡಿ.ಎ. ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!