ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವ ಅಧ್ಯಕ್ಷತೆಯಲ್ಲಿ ಶ್ರೀಮಂಗಲ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ

ಪೊನ್ನಂಪೇಟೆ :ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ, ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.
ಸುಮಾರು ನಾಲ್ಕು ಗಂಟೆಗಳಿಗೂ ಅಧಿಕ ಕಾಲ ನಡೆದ ಪ್ರಜಾ ಸೇವೆ ಅಭಿಯಾನದಲ್ಲಿ, ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು. ಅರಣ್ಯ ಇಲಾಖೆ, ಕಂದಾಯ ಇಲಾಖೆ, ವಿದ್ಯುತ್ ಇಲಾಖೆ, ಗ್ರಾಮೀಣ ಮತ್ತು ಕುಡಿಯುವ ನೀರು ಸರಬರಾಜು ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದರು.

ಸುಮಾರು 134 ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆ ಮಾಡಲಾಯಿತು.
ಬಳಿಕ ಸಭೆಯನ್ನು ಉದ್ದೇಶಿಸಿ ಮಾನ್ಯ ಶಾಸಕರು ಮಾತನಾಡುತ್ತಾ, ಸಲ್ಲಿಕೆಯಾದ ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಉಳಿದ ಅರ್ಜಿಗಳನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ತಿಳಿಸಿದರು. ಆರೋಗ್ಯ ಸೇವೆ, ಮನೆ ನಿರ್ಮಾಣ ಹಾಗೂ ಇತರ ಸೌಲಭ್ಯಗಳ ಕುರಿತು ಸ್ಥಳದಲ್ಲೇ ಪರಿಹಾರ ನೀಡಲಾಯಿತು. ಅರಣ್ಯ ಇಲಾಖೆ ಸಂಬಂಧಪಟ್ಟಂತೆ ಅತಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಯಿತು.

ಈ ಸಭೆಗೆ ಗೈರು ಹಾಜರಾದ ಕೆಲವು ಅಧಿಕಾರಿಗಳ ವಿರುದ್ಧ ಗರಂ ಆದ ಮಾನ್ಯ ಶಾಸಕರು, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಸ್ಪಂದಿಸುವ ನಿಟ್ಟಿನಲ್ಲಿ ಅತ್ಯಂತ ಗಂಭೀರವಾಗಿ ವರ್ತಿಸಬೇಕು. ಇಂತಹ ಬೇಜವಾಬ್ದಾರಿತನವನ್ನು ಎಂದಿಗೂ ಸಹಿಸುವುದಿಲ್ಲ ಇಂದು ಖಡಕ್ ಎಚ್ಚರಿಕೆ ನೀಡಿದರು.
ಅರ್ಹ ಫಲಾನುಭವಿಗಳಿಗೆ ಹಲವು ಸವಲತ್ತುಗಳ ವಿತರಣೆ.
ಅರಣ್ಯ ಇಲಾಖೆ ವತಿಯಿಂದ, ಆಯ್ದ ಅರ್ಹ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವು ಈ ಸಭಾಂಗಣದಲ್ಲಿ ನಡೆಯಿತು. ಬಳಿಕ ಕಾಡಂಚಿನ ಅರ್ಹ ನಿವಾಸಿಗಳಿಗೆ ಹಕ್ಕುಪತ್ರವನ್ನು ನೀಡಲಾಯಿತು. ಅಂತರ್ಜಾತಿ ವಿವಾಹ ಆದ ಜೋಡಿಗಳಿಗೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಐಟಿಡಿಪಿ ಇಲಾಖೆಯಿಂದ ₹1.50 ಲಕ್ಷಗಳ ಪ್ರೋತ್ಸಾಹ ನೀಡುವ ಪತ್ರವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಸರಕಾರ ನೀಡುತ್ತಿರುವ ಈ ಎಲ್ಲಾ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ತಮ್ಮ ಜೀವನದಲ್ಲಿ ಯಶಸ್ಸು ಕಾಣುವಂತೆ ಆಗಬೇಕೆಂದು ಮಾನ್ಯ ಶಾಸಕರು ಆಶಿಸಿದರು.

ಆಂದೋಲನ ಕಾರ್ಯಕ್ರಮದಲ್ಲಿ ಉಪವಿಭಾಗಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ, ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ತಾಲೂಕು ಇ ಓ ರಾಜೇಶ್, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!