ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರಿ.) ರಾಯಚೂರು ವತಿಯಿಂದ ತಾಲೂಕ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ.

ಲಿಂಗಸಗೂರು: ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರಿ.) ರಾಯಚೂರು ಆಯೋಜಿಸಿದ್ದ ತಾಲೂಕ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಇತ್ತೀಚೆಗೆ ಲಿಂಗಸುಗೂರು ವಿಜೃಂಭಣೆಯಿಂದ ಜರುಗಿತು.

ಈ ಕಾರ್ಯಕ್ರಮದಲ್ಲಿ ಲಿಂಗಸಗೂರಿನ ಪ್ರತಿಷ್ಠಿತ ಶ್ರೀ ವಿನಾಯಕ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಅಶೋಕ್ ವಿ. ಕರಡಕಲ್ ಅವರನ್ನು ಅವರ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಅನುಪಮ ಸಾಧನೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ಶ್ರೀ ಅಶೋಕ್ ವಿ. ಕರಡಕಲ್ ಅವರು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಿ, ಶಿಸ್ತು ಮತ್ತು ದೈಹಿಕ ಸದೃಢತೆಗೆ ಹೆಚ್ಚಿನ ಒತ್ತು ನೀಡಿ ಸಂಸ್ಥೆಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಾರೆ. ಅವರ ಈ ಸೇವೆಯನ್ನು ಪರಿಗಣಿಸಿ ವಿನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಅವರಿಗೆ “ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಶಸ್ತಿ ಪುರಸ್ಕೃತರಾದ ಅಶೋಕ್ ವಿ. ಕರಡಕಲ್ ಸರ್ ಅವರನ್ನು ವಿನಾಯಕ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ಬಳಗ, ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!