ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖ್ಯಮಂತ್ರಿಗಳ ಆಗಮನ ಪೂರ್ವಭಾವಿ ಸಭೆ.

ಕೊಳ್ಳೇಗಾಲ : ವಿಧಾನಸಭಾ ಕ್ಷೇತ್ರದ ಕೇಂದ್ರ ಸ್ಥಾನ ಎಂ. ಜಿ ಎಸ್. ವಿ ಕಾಲೇಜು ಮೈದಾನದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇತರ ಸಚಿವರ ಸಮ್ಮುಖದಲ್ಲಿ ಸೆ. 30 ರಂದು ನಡೆಯುವ ಕ್ಷೇತ್ರ
ವ್ಯಾಪ್ತಿಯಲ್ಲಿ 20 ಹೆಚ್ವು ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆ

ಜಿಲ್ಲಾ ಉಸ್ತುವಾರಿ ಸಚಿವರು ಕೊಳ್ಳೇಗಾಲ ಶಾಸಕ ಎ. ಆರ್. ಕೃಷ್ಣಮೂರ್ತಿ ಮಾಜಿ ಶಾಸಕರುಗಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳ ಪೂರ್ವಭಾವಿ ಸಭೆಯನ್ನು ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗಶೆಟ್ಟಿರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಮಾಡಬೇಕಾಗಿತ್ತು ಆದರೆ ಅವರು ಪದತ್ಯಾಗ ಮಾಡಿದ ಮೇಲೆ ಹಾಲಿ ಮುಖ್ಯಮಂತ್ರಿಗಳಾಗಿರುವ ಡಿ. ಕೆ. ಶಿವಕುಮಾರ್ ರವರು ಸಚಿವರುಗಳ ನೇತೃತ್ವದಲ್ಲಿ ಆ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ, ಸಿದ್ದರಾಮಯ್ಯನವರ ಕ್ಯಾಬಿನೆಟ್ ನಲ್ಲಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿತ್ತು ಜಿಲ್ಲಾಸ್ಪತ್ರೆ, ಸೇತುವೆ, ತೆಂಗಿನ ಕಾಯಿ ಮಾರುಕಟ್ಟೆ, ಬಿಲ್ವಿದ್ಯಾ ತರಭೇತಿ ಶಾಲೆ, ಒಲಂಗಣ ಕ್ರೀಡಾಂಗಣ, ಶಾದಿ ಮಹಲ್ ಕುರುಬನ ಕಟ್ಟೆ ಅಭಿವೃದ್ಧಿ ಕಾಮಗಾರಿ,
ಅನೇಕ ಕಾಮಗಾರಿಗಳು, ಸುಮಾರು 20 ಕ್ಕೂ ಹೆಚ್ಚು ಕಾಮಗಾರಿಗಳಿಗೆ ಸೆ. 30
ಡಿ.ಕೆ ಶಿವಕುಮಾರ್ ರವರ ಸರ್ಕಾರದಲ್ಲಿ ಹೊಂಗನೂರು ಹಿರಿಕೆರೆ ಅಭಿವೃದ್ಧಿ 18 ಕೋಟಿ, ಗುಂಡಾಲ್ ಜಲಾಶಯ ಅಭಿವೃದ್ಧಿ 50 ಕೋಟಿ ಅನುದಾನ ಮಂಜೂರಾಗಿರುತ್ತದೆ,
ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆಯ ಬಗ್ಗೆ ಭೀಮನಗರದ ಮುಖಂಡರ ಜೊತೆ ಮಾತನಾಡಿ ಕಾರ್ಯಕ್ರಮವನ್ನು ಅಯೋಜನೆ ನಮಗೆ 19 ವರ್ಷ ವನವಾಸ ಕೊಳ್ಳೇಗಾಲ ಅಂಬೇಡ್ಕರ್ ಸಮುದಾಯ ಭವನ 20 ವರ್ಷ ವನವಾಸವಾಗಿ ಈಗ ನನ್ನ ಅವಧಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿದೆ ಸುಮಾರು 7 ಕೋಟಿ 50 ಲಕ್ಷ ರೂಪಾಯಿ ಅನುದಾನ ತಗುಲಿದೆ, ಆದ್ದರಿಂದ ಸಮುದಾಯದ ಮುಖಂಡರು ಯಜಮಾನರುಗಳ ಜೊತೆ ಮಾತನಾಡಿ ಉದ್ಘಾಟನೆಗೆ ಸಿದ್ಧತೆ ಮಾಡಲಾಗುವುದು ಮಾಡಲಾಗುವುದು,
ಹಾಗೆ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಎಲ್ಲಾ ವರ್ಗದ ಸಮುದಾಯ ಭವನಗಳಿಗೆ ಅನುದಾನವನ್ನು ಕೊಡಲಾಗಿದೆ.
ಬಸವ ಭವನ, ಕನಕ ಭವನ, ವಾಲ್ಮೀಕಿ ಭವನ, ಭಗೀರಥ ಭವನ, ಒಕ್ಕಲಿಗ ಭವನ, ಶಾದಿ ಮಹಲ್, ಹಾಗೂ ಎಲ್ಲಾ ಭವನಗಳ ನಿರ್ಮಾಣ ಮತ್ತು ಮುಂದುವರಿದ ಕಾಮಗಾರಿಗಳಿಗೆ ಅನುದಾನವನ್ನು ಕೊಡಲಾಗಿದೆ, ಜೊತೆಗೆ ಲಿಂಗಾಯತರ ಬೀದಿ, ಪರಿಶಿಷ್ಟರ ಬೀದಿ, ನಾಯಕರ ಬೀದಿ, ಉಪ್ಪಾರ ಬೀದಿ, ಮಡಿವಾಳರ ಬೀದಿ ಅಲ್ಪ ಸಂಖ್ಯಾತರ ಬೀದಿಗಳಲ್ಲಿ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಅನುದಾನವನ್ನು ಕೊಡಲಾಗಿದೆ, ಎಲ್ಲಾ ಕಾಮಗಾರಿಗಳಿಗೆ ಸಿದ್ದರಾಮಯ್ಯನವರು ಅನುದಾನವನ್ನು ಕೊಟ್ಟು ತಮ್ಮ ಸ್ಥಾನದಿಂದ ನಿರ್ಗಮಿಸಿದ ಮೇಲೆ ಡಿ. ಕೆ. ಶಿವಕುಮಾರ್ ರವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನಡೆಸಿಕೊಡಲು ಸೆ. 30 ರಂದು ಕೊಳ್ಳೇಗಾಲ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಆದ್ದರಿಂದ ಪಕ್ಷ. ಮುಖಂಡರು ಕಾರ್ಯಕರ್ತರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಪಕ್ಷದ ಪದಾಧಿಕಾರಿಗಳು ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲ ಪಡಿಸಬೇಕು ಎಂದರು

ನಂತರ ಹನೂರು ಮಾಜಿ ಶಾಸಕ ಆರ್. ನರೇಂದ್ರ ಮಾತನಾಡಿ ಸೆ. 30 ರಂದು ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮ ಒಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಏಕೆಂದರೆ ಕಾಂಗ್ರೆಸ್ ಸರ್ಕಾರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ, ಹಾಗೆಯೇ ಹನೂರು ಕ್ಷೇತ್ರದಲ್ಲಿ ನಾನು ಕೂಡ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿದ್ದೇನೆ ಪಾಳ್ಯ ಆಸ್ಪತ್ರೆ, ದೊಡ್ಡಿಂದುವಾಡಿ ಆಸ್ಪತ್ರೆ, ರಾಮಪುರ ಆಸ್ಪತ್ರೆ, ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಿರಿ ಜನರಿಗಾಗಿ ವಸತಿ ಶಾಲಾ ಕಾಲೇಜುಗಳನ್ನು ನಿರ್ಮಾಣ ಮಾಡಿಸಿದ್ದೇನೆ,
ಕೆರೆಗಳ ನೀರು ತುಂಬಿಸುವ ಕೆಲಸಗಳನ್ನು ಮಾಡಿಸಿದ್ದೇನೆ ಇದೆಲ್ಲ ನಮ್ಮ ಸರ್ಕಾರ ಅವಧಿಯಲ್ಲಿ ಈಗ ಕೊಳ್ಳೇಗಾಲದಲ್ಲಿ ಸುಮಾರು 411 ಕೋಟಿ ಅನುದಾನದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಆದ್ದರಿಂದ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರುಗಳು ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ,
ಚುನಾವಣೆ ಸಂದರ್ಭದಲ್ಲಿ ಮಾತು ಕೊಟ್ಟ ಹಾಗೆ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಕೊಟ್ಟಿದ್ದಾರೆ, ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ಕೊಡುತ್ತಿದ್ದಾರೆ,
ವಿರೋಧ ಪಕ್ಷದವರು ಸುಖಸುಮ್ಮನೆ ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡಿ
ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ,
ಆದರೆ ರಾಜ್ಯದಲ್ಲಿ ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ, ಆದ್ದರಿಂದ ಪಕ್ಷದ ಮುಖಂಡರು ಮುಂದಿನ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷವನ್ನು ಬಲ ಪಡಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವ ನಿಟ್ಟಿನಲ್ಲಿ ದುಡಿಯಬೇಕು ಎಂದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗಶೆಟ್ಟಿಯವರು ಮಾತನಾಡಿ ಸೆ. 30 ರಂದು ಕೊಳ್ಳೇಗಾಲದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ನೇತೃತ್ವದ ಕಾರ್ಯಕ್ರಮ ಅದ್ದೂರಿಯಾಗಿ ಯಶಸ್ವಿಯಾಗಿ ನಡೆಯಬೇಕು, ಆದ್ದರಿಂದ ಪಕ್ಷದ ಮುಖಂಡರು ಕಾರ್ಯಕರ್ತರು ಶ್ರಮ ವಹಿಸಬೇಕು,, ಹೆಚ್ಚು ಜನರನ್ನು ಸೇರಿಸಿ ಮುಂದೆ ನಮ್ಮ ಜಿಲ್ಲೆಯಲ್ಲಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಾತನಾಡ ಬೇಕಿದೆ,
ಇಡೀ ದೇಶದಲ್ಲಿ ಬಡ ಜನರ ರೈತರ ಪರವಾಗಿ ಇರುವ ಸರ್ಕಾರ ಅಂತ ಇದ್ರೆ ಅದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ, ಬಿಜೆಪಿಯವರು ಸುಳ್ಳು ಹೇಳುವುದೇ ಅವರ ಕಸುಬಾಗಿದೆ, ಸುಳ್ಳು ಹೇಳುವುದರಲ್ಲಿ ಪಿ. ಎಚ್. ಡಿ ಮಾಡಿದ್ದಾರೆ,
ಕುಮಾರ್ ಸ್ವಾಮಿ ಹಾಗೂ ಸಾಲ ಮನ್ನಾ ಮಾಡಿ ಅಂತ ಕಾಂಗ್ರೆಸ್ ಸರ್ಕಾರಕ್ಕೆ ಹೇಳುತ್ತಾರೆ ಕುಮಾರ್ ಸ್ವಾಮಿಯವರು ಕೇಂದ್ರ ಮಂತ್ರಿಗಳಾಗಿದ್ದಾರೆ ಇವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿ ಸಾಲ ಮನ್ನಾ ಮಾಡಿಸಲು, ಬಿಜೆಪಿಯವರಿಗೆ ಜೆಡಿಎಸ್ ಕುಮಾರಸ್ವಾಮಿಯವರಿಗೆ ನರೇಂದ್ರ ಮೋದಿಯವರ ಜೊತೆ ಮಾತನಾಡಲು ಧೈರ್ಯ ಇಲ್ಲ ಸುಮ್ಮೆನೆ ಇಲ್ಲಿ ಬಂದು ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಾರೆ, ಅವರ ಮಾತಿಗೆ ತಲೆ ಕೆಡಿಸಿಕೊಳ್ಳಬಾರದು ಪಕ್ಷ ಕಾರ್ಯಕರ್ತರು ಮುಖಂಡರು ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹಾಗೂ ಮಾಜಿ ಶಾಸಕ ನರೇಂದ್ರ ರವರು ಎಸ್ಪಿ ಮುತ್ತುಕುಮಾರ್, ಡಿ. ವೈ. ಎಸ್ಪಿ ಮೋಹನ್, ನೇತೃತ್ವದಲ್ಲಿ
ಪಟ್ಟಣದ ಎಂ. ಜಿ. ಎಸ್ ವಿ ಕಾಲೇಜು ಮೈಧಾನಕ್ಕೆ ತೆರಳಿ ಕಾರ್ಯಕ್ರಮಕ್ಕಾಗಿ ವೇದಿಕೆ ಸಿದ್ಧತೆ ಹಾಗೂ ಭದ್ರತೆಯ ಬಗ್ಗೆ ಪರಿಶೀಲಿಸಿದರು.

ಕಾರ್ಯಕ್ರಮ ವೇದಿಕೆಯಲ್ಲಿ ಮಾಜಿ ಶಾಸಕರು ಹಾಗೂ ರಾಜ್ಯ ಕೆ.ಪಿ.ಸಿ. ಸಿ ಉಪಾಧ್ಯಕ್ಷರಾದ ಜಿ. ಎನ್. ನಂಜುಂಡಸ್ವಾಮಿ,
ಕಾಡಾ ಅಧ್ಯಕ್ಷರಾದ ಮರಿಸ್ವಾಮಿ, ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷರಾದ
ಯೋಗೇಶ್, ಹನೂರು ಬ್ಲಾಕ್ ಅಧ್ಯಕ್ಷರಾದ ಮುಕುಂದ ವರ್ಮ, ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಚಂದ್ರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಳ್ಳೇಗಾಲ ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷರಾದ ರಾಜೇಂದ್ರ, ಕೊಳ್ಳೇಗಾಲ ಬ್ಲಾಕ್ ಅಧ್ಯಕ್ಷ ತೋಟೇಶ್, ಯೂತ್ ಕಾಂಗ್ರೆಸ್ ಮುಖಂಡ ಜಿ. ಎನ್. ಲೋಕೇಶ್, ಹಾಗೂ ಇನ್ನಿತರರು ಇದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಮೈಸೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!