ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುನಗುಂದ ಪಿಕೆಪಿಎಸ್‌ಗೆ ₹20.16 ಲಕ್ಷ ನಿವ್ವಳ ಲಾಭ

ಹುನಗುಂದ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ರೈತರು, ಗ್ರಾಹಕರು ಹಾಗೂ ಠೇವಣಿದಾರರ ಸಹಕಾರದಿಂದ 2025-26ನೇ ಸಾಲಿನಲ್ಲಿ ₹20.16 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ದೀಪಾ ಸುಂಕದ ಹೇಳಿದರು.
ಪಟ್ಟಣದ ಬಸವ ಮಂಟಪದಲ್ಲಿ ನಡೆದ ಸಂಘದ 113ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘದಿಂದ ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಗುವ ಬೆಳೆ ಸಾಲದ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಲಾಗಿದೆ. ಸದಸ್ಯರು ಸಂಘದಿಂದ ಪಡೆದ ಬೆಳೆ ಸಾಲ, ಸಿಸಿ ಸಾಲ ಸೇರಿದಂತೆ ವಿವಿಧ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವ ಬೆಳೆ ಸಾಲದ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸುವುದು, ಡಿವಿಡೆಂಡ್ ಹೆಚ್ಚಳ, ಸಂಘದ ಲಾಭಾಂಶ, ಸಿಸಿ ಸಾಲ ಹಾಗೂ ಕೋಲ್ಡ್ ಸ್ಟೋರೇಜ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಸದಸ್ಯರು ಚರ್ಚಿಸಿದರು. ಸಂಘದ ಅಭಿವೃದ್ಧಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು.
ಆಡಳಿತ ಮಂಡಳಿ ನಿರ್ದೇಶಕರಾದ ರವಿ ಹುಚನೂರ, ದೇವು ಡಂಬಳ ಹಾಗೂ ವ್ಯವಸ್ಥಾಪಕ ಸಂಗಣ್ಣ ಹಳ್ಳೂರ ಸೇರಿದಂತೆ ಇತರರು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.
ಮಹಾಂತೇಶ ಹೊಸೂರ, ಚೇತನ ಮುಕ್ಕಣ್ಣವರ, ಬಸಪ್ಪ ಹಾದಿಮನಿ, ಸಂಗಮೇಶ ಭದ್ರಶೆಟ್ಟಿ, ಅನ್ನಪೂರ್ಣ ಹೊಸೂರ, ರವಿ ಹೂಲಗೇರಿ ಹಾಗೂ ಹನಮಂತಪ್ಪ ವಾಲ್ಮೀಕಿ ಉಪಸ್ಥಿತರಿದ್ದರು.
ಚಿತ್ರಸುದ್ದಿ: ಹುನಗುಂದದ ಬಸವ ಮಂಟಪದಲ್ಲಿ ನಡೆದ 113ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷೆ ದೀಪಾ ಸುಂಕದ ಮಾತನಾಡಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!