ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣ ಸಂಸ್ಥೆಗಳಲ್ಲಿ ಶಶೀಲ್ ಜಿ. ನಮೋಶಿ ಪರ ಜಿ. ಸೋಮಶೇಖರ್ ರೆಡ್ಡಿ ಭರ್ಜರಿ ಮತಯಾಚನೆ

ಶಿಕ್ಷಕರ ಕ್ಷೇತ್ರ ಚುನಾವಣೆ: ಕಂಪ್ಲಿಯಲ್ಲಿ ಬಿಜೆಪಿ ಮುಖಂಡರಿಂದ ಮತಬೇಟೆ

ಬಳ್ಳಾರಿ / ಕಂಪ್ಲಿ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಮುಂಬರುವ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ಗರಿಗೆದರಿದ ‘ಈಶಾನ್ಯ ಶಿಕ್ಷಕರ’ ಚುನಾವಣೆ, ಇಲ್ಲಿನ ವೀರಶೈವ ಸಂಘದ ಶಿಕ್ಷಣ ಸಂಸ್ಥೆಗಳಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರವಾಗಿ ಭರ್ಜರಿ ಮತಯಾಚನೆ ನಡೆಸಲಾಯಿತು.
ಮಾಜಿ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ ನೇತೃತ್ವದ ಪ್ರಮುಖ ಮುಖಂಡರ ತಂಡವು ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮತದಾರರನ್ನು ಭೇಟಿ ಮಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಹಾಲಿ ಶಾಸಕರೂ ಹಾಗೂ ಬಿಜೆಪಿ ಅಭ್ಯರ್ಥಿಯೂ ಆದ ಶಶೀಲ್ ಜಿ. ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅಧಿಕ ಬಹುಮತದಿಂದ ಗೆಲ್ಲಿಸಬೇಕೆಂದು ಕೋರಿದರು. ಸಭೆಯಲ್ಲಿ ಮಾತನಾಡಿದ ಮುಖಂಡರು, “ಶಿಕ್ಷಕರ ವೇತನ ತಾರತಮ್ಯ, ಅನುದಾನಿತ ಶಾಲೆಗಳ ಸಮಸ್ಯೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ಹಿತರಕ್ಷಣೆಗಾಗಿ ಶಶೀಲ್ ನಮೋಶಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಶಶೀಲ್ ಜಿ ನಮೋಶಿ ಕಾರ್ಯಗಳು. ಅವರ ಕೈ ಬಲಪಡಿಸಲು ಪ್ರತಿಯೊಬ್ಬ ಶಿಕ್ಷಕ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ದಿವಾಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಅಳಲ್ಲಿ ವಿರೇಶ್, ಕಂಪ್ಲಿ ತಾಲೂಕು ಮಂಡಲ ಅಧ್ಯಕ್ಷರಾದ ಸಿ. ಡಿ. ಮಹದೇವ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!