
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಸೀಮಂತ ಕಾರ್ಯಕ್ರಮ ನಡೆಯಿತು.
ದಿನಾಂಕ 30-09-2026 ರಂದು ಗ್ರಾಮ ಪಂಚಾಯಿತಿ ಹೆಬ್ಬಾಲೆಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಹೆಬ್ಬಾಲೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆ ಇವರ ಸಂಯುಕ್ತಾಶ್ರಯದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಸೀಮಂತ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಪಿಡಿಒ ರವಿ ಕುಮಾರ್ ರವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಹೆಬ್ಬಾಲೆ ಆರೋಗ್ಯ ಕೇಂದ್ರದ ಮೇಲ್ವಿಚಾರಕರಾದ ಲತಾ ಕುಮಾರಿ ರವರು ಗರ್ಭಿಣಿ, ಬಾಣಂತಿ ಮಗುವಿನ ಆರೈಕೆ ಬಗ್ಗೆ ಮಾಹಿತಿಯನ್ನು ನೀಡಿದರು.
RKSK ಆಪ್ತ ಸಮಾಲೋಚಕರಾದ ಶೈಲಜಾ ರವರು ಹದಿಹರೆಯದ ಆರೋಗ್ಯದ ಬಗ್ಗೆ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆಗುವ ತೊಂದರೆ ಬಗ್ಗೆ ಮಾಹಿತಿಯನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮತಾರವರು ಗೃಹಲಕ್ಷ್ಮಿ ಬಗ್ಗೆ, ಮಾತೃ ವಂದನಾ ಬಗ್ಗೆ ಮಾಹಿತಿಯನ್ನು ನೀಡಿದರು.
ಆರೋಗ್ಯ ನಿರೀಕ್ಷಕರಾದ ಸಂಜಯ್ ರವರು ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾರ್ಯಕ್ರಮ ಮಾಡಲು ತಿಳಿಸಿದರು.
4 ಗರ್ಭಿಣಿ ಮಹಿಳೆಯರಿಗೆ ಸೀಮಂತವನ್ನು ಮಾಡಲಾಯಿತು.
ಅಂಗನವಾಡಿ ಕಾರ್ಯಕರ್ತೆಯರಾದ ವನಜಾಕ್ಷಿ ಮತ್ತು ಸುಧಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಸರಸ್ವತಿ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹೆಬ್ಬಾಲೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ, ಹೆಬ್ಬಾಲೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ , ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.




















