ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಭರ್ಜರಿ ಮತಬೇಟೆ,ಉದ್ಯೋಗ ಸೃಷ್ಟಿ, ಸೇವಾ ಭದ್ರತೆಗೆ ಹೋರಾಟದ ಭರವಸೆ.

ಕೊರಟಗೆರೆ. ಇಂದು ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಇತಿಹಾಸ ಪ್ರಸಿದ್ಧ ಕಟ್ಟೆ ಗಣಪತಿ ಪೂಜೆ ಸಲ್ಲಿಸಿ ನಂತರ ಮತದಾರ ಬೇಟೆಗೆ ಪ್ರವಾಸ ಕೈಗೊಂಡಿದ್ದು, ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ.
ಇದರ ಬೆನ್ನಲ್ಲೇ ಎನ್‌ಡಿಎ ಅಭ್ಯರ್ಥಿ ಕೆ. ಎಂ. ಸುರೇಶ್ ಅವರು ಕೊರಟಗೆರೆ ತಾಲ್ಲೂಕಿನಲ್ಲಿ ಇಂದು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಬೆಳಗ್ಗೆಯಿಂದಲೇ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ವಿವಿಧೆಡೆ ತೆರಳಿ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿದ್ದಾರೆ.

ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವುದಾಗಿ ಭರವಸೆ ನೀಡಿರುವ ಸುರೇಶ್, ನಿರುದ್ಯೋಗ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಕೊರಟಗೆರೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಭರ್ಜರಿ ಮತಯಾಚನೆ.
ತಾಲ್ಲೂಕಿನ ಕಾಳಿದಾಸ ಸ್ಕೂಲ್, ಸರ್ಕಾರಿ ಜೂನಿಯರ್ ಕಾಲೇಜು, ಸರ್ಕಾರಿ ಹೈಸ್ಕೂಲ್, ರಾಘವೇಂದ್ರ ಶಾಲೆ, ಗರ್ಲ್ಸ್ ಹೈಸ್ಕೂಲ್, ಚಾಣಕ್ಯ ಸ್ಕೂಲ್, ಜಿಕೆ ಮೆಮೋರಿಯಲ್ ಸ್ಕೂಲ್, ನ್ಯಾಯಾಲಯ ಸಂಕೀರ್ಣ, ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರಿಯದರ್ಶಿನಿ ಕಾಲೇಜು ಹಾಗೂ ರವೀಂದ್ರ ಭಾರತಿ ಸ್ಕೂಲ್ ಸೇರಿದಂತೆ ವಿವಿಧೆಡೆ ಭೇಟಿ ನೀಡಿದರು.
ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸರ್ಕಾರಿ ನೌಕರರು ಹಾಗೂ ನೋಂದಾಯಿತ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ವೇಳೆ ಪದವೀಧರರ ಸಮಸ್ಯೆಗಳು, ಉದ್ಯೋಗಾವಕಾಶಗಳು ಹಾಗೂ ಶಿಕ್ಷಣ ಕ್ಷೇತ್ರದ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.

ನಂತರ ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಾಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ. ಎಂ. ಸುರೇಶ್, ಪದವೀಧರರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಧ್ವನಿಯಾಗುವುದಾಗಿ ಹೇಳಿದರು.

ಕೆ. ಎಂ. ಸುರೇಶ್ ಮಾತನಾಡಿ
“ಪದವೀಧರ ಕ್ಷೇತ್ರ ಕೇವಲ ಒಂದು ಚುನಾವಣೆ ಅಲ್ಲ. ಇದು ವಿದ್ಯಾವಂತರ ಧ್ವನಿ. ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ, ಗುತ್ತಿಗೆ ಹಾಗೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಖಾಸಗಿ ಶಾಲಾ-ಕಾಲೇಜು ಶಿಕ್ಷಕರ ಸಮಸ್ಯೆಗಳ ಪರಿಹಾರ ಸೇರಿದಂತೆ ಪದವೀಧರರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಪ್ರಬಲವಾಗಿ ಹೋರಾಟ ಮಾಡುತ್ತೇನೆ. ಪದವೀಧರರು ತಮ್ಮ ಅಮೂಲ್ಯ ಮತ ನೀಡಿ ಆಶೀರ್ವದಿಸಬೇಕು.”
ಇನ್ನು ಬಿಜೆಪಿ ಮುಖಂಡರು ಕೂಡ ಕೆ.ಎಂ. ಸುರೇಶ್ ಪರ ಮತಯಾಚನೆ ನಡೆಸಿದರು.
ಸುರೇಶ್ ಅವರು ಪದವೀಧರರ ಸಮಸ್ಯೆಗಳನ್ನು ಅರಿತಿರುವ ಅಭ್ಯರ್ಥಿಯಾಗಿದ್ದು, ಈ ಬಾರಿ ಅವರನ್ನು ಬೆಂಬಲಿಸುವಂತೆ ಮುಖಂಡರು ಮನವಿ ಮಾಡಿದರು.

ಆಗ್ನೇಯ ಪದವೀಧರ ಅಭ್ಯರ್ಥಿಗಳು ಗೆದ್ದ ನಂತರ ಕ್ಷೇತ್ರಕ್ಕೆ ಭೇಟಿ ಮಾಡುವುದಾಗಲಿ ಸಮಸ್ಯೆಗಳ ಬಗ್ಗೆ ಪರಿಹಾರವಾಗಲಿ ಮಾಡುವುದಿಲ್ಲ, ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಕಾಮರಾಜಣ್ಣನವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರು , ಜೆಡಿಎಸ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಪದವೀಧರ ಮತದಾರರು ಉಪಸ್ಥಿತರಿದ್ದರು.

ವರದಿ. ಪ್ರಸನ್ನಕುಮಾರ .ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!