ಕಲಬುರಗಿ : ಕಾಳಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ನೂತನ ಅಧ್ಯಕ್ಷ ಸಾಲಿಯಾ ಬೇಗಂ ಬಿಜಾಪುರ ಮತ್ತು ಉಪಾಧ್ಯಕ್ಷ ಶರಣಪ್ಪ ಬೇಲೂರು ಅವರನ್ನು ಕಾಂಗ್ರೆಸ್ ಮುಖಂಡರು, ಸದಸ್ಯರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು.
ಕಾಳಗಿ: ಕಾಳಗಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ ಏಳು ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸಾಲಿಯ ಬೇಗಂ ಬಿಜಾಪುರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶರಣಪ್ಪ ಬೇಲೂರು ಸ್ಪರ್ಧಿಸಿದ್ದು. ಮತದಾನದಲ್ಲಿ ಇಬ್ಬರೂ ತಲಾ ಏಳು ಮತಗಳನ್ನು ಪಡೆದು ಆಯ್ಕೆಯಾದರು.
ಇವರ ಎದುರಾಗಿ ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕಿಟ್ಟದ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಿತೇಂದ್ರ ರಾಠೋಡ ಸ್ಪರ್ಧಿಸಿದರು.
ಇಬ್ಬರೂ ತಲಾ ಆರು ಮತಗಳನ್ನು ಪಡೆದರು. ಈ ಮೂಲಕ ತಲಾ ಒಂದು ಮತಗಳ ಅಂತರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಧಿಗಳು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ತಮ್ಮದಾಗಿಸಿಕೊಂಡರು.
ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಯಿತು. ನೂತನ ಅಧ್ಯಕ್ಷೆ ಸಾಲಿಯಾ ಬೇಗಂ ಬಿಜಾಪುರ ಮತ್ತು ಉಪಾಧ್ಯಕ್ಷ ಶರಣಪ್ಪ ಬೇಲೂರು ಅವರಿಗೆ ಮುಖಂಡರು, ಸದಸ್ಯರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೀದರ್ ಸಂಸದರಾದ ಸಾಗರ್ ಖಂಡ್ರೆ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ,
ವಿಧಾನಪರಿಷತ್ ಸದಸ್ಯ ಜಗದೇವ ಗುತ್ತೆದಾರ್
ತಾಲೂಕಿನ ಎಲ್ಲಾ ಅಧಿಕಾರಿಗಳು ಮತ್ತು ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಯಿತು.
ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಇವರನ್ನು ಎಲ್ಲರೂ ಸನ್ಮಾನಿಸಿ ಶುಭಕೋರಿದರು.
ವರದಿ ಶ್ರೀಕಾಂತ




















