ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಲೆ ಕೊನೆ ಭಾಗದ ಜಮೀನಿಗೆ ನೀರು ಹರಿಸಲು ರೈತರ ಆಗ್ರಹ: ನೀರು ಕಳ್ಳತನಕ್ಕೆ ಕಡಿವಾಣ ಹಾಕಲು ಒತ್ತಾಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ಅಚ್ಚುಕಟ್ಟು ಪ್ರದೇಶದ ಕೃಷಿ ಭೂಮಿಗೆ ಸಮರ್ಪಕವಾಗಿ ನೀರೊದಗಿಸಬೇಕು ಮತ್ತು ನಾಲೆಗೆ ತಕ್ಷಣವೇ 50 ಕ್ಯೂಸೆಕ್ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ರೈತರು ನೀರಾವರಿ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ವಿ. ವೀರೇಶ್ ಅವರು, “ಪ್ರಸಕ್ತ ಹಂಗಾಮಿನಲ್ಲಿ ರೈತರು ಅಲ್ಪಾವಧಿ ಜೋಳದ ಬೆಳೆ ಬೆಳೆದಿದ್ದಾರೆ. ಬೆಳೆ ಕೈಗೆ ಬರುವ ಈ ಪ್ರಮುಖ ಹಂತದಲ್ಲಿ ನಾಲೆಯಲ್ಲಿ ನೀರು ಬಿಟ್ಟು ಐದು ದಿನಗಳಾಗಿದ್ದರೂ ಕೊನೆಯ ಭಾಗದ ಜಮೀನುಗಳಿಗೆ ಇನ್ನೂ ನೀರು ತಲುಪಿಲ್ಲ. ನಾಲೆ ಮೇಲ್ಭಾಗದ ಜಮೀನುಗಳ ಮಾಲೀಕರು ಸೈಫಾನ್ ಪೈಪುಗಳು, ನೆಲದೊಳಗಿನ ಪೈಪ್‌ಲೈನ್‌ಗಳು ಹಾಗೂ ಮೋಟಾರ್‌ಗಳನ್ನು ಅಳವಡಿಸಿಕೊಂಡು ಕಾನೂನುಬಾಹಿರವಾಗಿ ನೀರು ಪಡೆಯುತ್ತಿದ್ದಾರೆ. ಇದರಿಂದಾಗಿ ಕೆಳಭಾಗದ ರೈತರಿಗೆ ಅನ್ಯಾಯವಾಗುತ್ತಿದ್ದು, ಈ ನೀರು ಕಳ್ಳತನಕ್ಕೆ ಅಧಿಕಾರಿಗಳು ತಕ್ಷಣ ಕಡಿವಾಣ ಹಾಕಬೇಕು” ಎಂದು ತೀವ್ರವಾಗಿ ಒತ್ತಾಯಿಸಿದರು.
ರೈತರ ಅಹವಾಲು ಸ್ವೀಕರಿಸಿ ಮಾತನಾಡಿದ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಎ. ಶ್ರೀನಿವಾಸ ಅವರು, “ಪ್ರಸಕ್ತ ವರ್ಷ ಮಳೆ ಕೊರತೆ ಇರುವುದರಿಂದ ಜಲಾಶಯದಲ್ಲಿನ ಲಭ್ಯವಿರುವ ನೀರನ್ನು ರೈತರು ಅತ್ಯಂತ ಜಾಗರೂಕತೆಯಿಂದ ಸದುಪಯೋಗಪಡಿಸಿಕೊಳ್ಳಬೇಕು. ನಾಲೆ ಮೇಲ್ಭಾಗದಲ್ಲಿ ನಡೆಯುತ್ತಿರುವ ನೀರು ಕಳವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಅಕ್ರಮಗಳನ್ನು ತಡೆದು, ನಾಲೆಯ ಕೊನೆಯ ಭಾಗದ (ಟೇಲೆಂಡ್) ವರೆಗೂ ನೀರು ತಲುಪಿಸಲು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖ ರೈತರಾದ ಕೆ. ಖಾಸಿಂಸಾಬ್, ಬುರೆಡ್ಡಿ ಸಣ್ಣ ಜಡೆಪ್ಪ, ಬುರೆಡ್ಡಿ ಬಸವರಾಜ, ಸುಮಂತಸ್ವಾಮಿ, ಪಾರ್ಥನವರ ಜಡೆಪ್ಪ, ಹುಲೆಪ್ಪ ಪಿಂಜಾರ, ಗಾಣಿಗರ ಜಡೆಪ್ಪ, ಗಾಣಿಗರ ರಾಜಶೇಖರ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!