ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಚ್ಛತೆ ಕೇವಲ ಪುರಸಭೆಯ ಕೆಲಸವಲ್ಲ, ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ

ಬಳ್ಳಾರಿ / ಕಂಪ್ಲಿ : ಸ್ವಚ್ಛತೆ ಎನ್ನುವುದು ಕೇವಲ ಪುರಸಭೆಗೆ ಸೀಮಿತವಾದ ಕೆಲಸವಲ್ಲ. ಅದರಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬ ನಾಗರಿಕರು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದಾಗ ಮಾತ್ರ ಆರೋಗ್ಯವಂತ ಹಾಗೂ ಸುಂದರವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ “ಒಂದು ದಿನ ಒಂದು ಗಂಟೆ ಎಲ್ಲರೂ ಒಂದಾಗಿ – ಸ್ವಚ್ಛತೆಯೇ ಸೇವೆ 2026” ಅಭಿಯಾನದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಚ್ಛತಾ ಕಾರ್ಯಕ್ರಮಗಳು ಕೇವಲ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಸೀಮಿತವಾಗಬಾರದು. ಅದು ನಿರಂತರ ಅಭಿಯಾನವಾದಾಗ ಮಾತ್ರ ಸ್ವಚ್ಛ ನಗರವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಮನುಷ್ಯನ ಆರೋಗ್ಯವೂ ಉತ್ತಮವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅಭಿಯಾನದ ಅಂಗವಾಗಿ ಪಟ್ಟಣದ ಪ್ರಮುಖ ವೃತ್ತವಾದ ಅಂಬೇಡ್ಕರ್ ವೃತ್ತ ಹಾಗೂ ಸುತ್ತಲಿನ ಪ್ರಮುಖ ರಸ್ತೆಗಳಲ್ಲಿ ಪುರಸಭೆ ಸಿಬ್ಬಂದಿ ಮತ್ತು ಸಾರ್ವಜನಿಕರು ಒಗೂಡಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಈ ಸಂದರ್ಭದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶಬಾಬು, ಸಿಬ್ಬಂದಿಗಳಾದ ರಮೇಶ ಬೆಳಂಕರ್, ಸುಧಾಕರ, ಗೌಸ್ ಸೇರಿದಂತೆ ಪುರಸಭೆಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!