
ಮುದ್ದೇಬಿಹಾಳ : ಶಿಕ್ಷಕ ವೃತ್ತಿಯ ಜವಾಬ್ದಾರಿಯನ್ನು ಅರಿತು, ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜ್ಞಾನದ ಜೊತೆಗೆ ಉತ್ತಮ ಮೌಲ್ಯಗಳು, ಶಿಸ್ತು ಹಾಗೂ ವ್ಯಕ್ತಿತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಪ್ರೊ. ಎಸ್.ಬಿ. ಚಳಗೇರಿ ಹೇಳಿದರು.
ಪಟ್ಟಣದ ಎಂ.ಜಿ.ವಿ.ಸಿ. ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರಶಿಕ್ಷಣಾರ್ಥಿಗಳ ಒಕ್ಕೂಟದ ಮುಕ್ತಾಯ ಹಾಗೂ ದೀಪದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಷ್ಟೇ ಅವರ ವ್ಯಕ್ತಿತ್ವ ವಿಕಾಸವೂ ಮುಖ್ಯವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ, ಅವರ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರೇರೇಪಿಸುವುದು ಅಗತ್ಯ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾನಶ್ರೀ ಎ.ಎಸ್. ತಡಸದ ಅವರು ಪ್ರಶಿಕ್ಷಣಾರ್ಥಿಗಳಿಗೆ ಶುಭ ಹಾರೈಸಿದರು.
ಪ್ರೊ. ವಿ.ಬಿ. ಕುಲಕರ್ಣಿ, ಕಾಲೇಜಿನ ಆಡಳಿತಾಧಿಕಾರಿಗಳು, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪ್ರೊ. (ಶ್ರೀಮತಿ) ಎಸ್.ಬಿ. ಸವಕಾರ, ಕಾರ್ಯಾಧ್ಯಕ್ಷರು ಹಾಗೂ ಶಿಕ್ಷಣ ಒಕ್ಕೂಟದ ಪದಾಧಿಕಾರಿಗಳು, ಡಾ. ಸಿ.ಎಸ್. ಬಂಡರಗಲ್ಲ, ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಹಾಗೂ ಕುಮಾರಿ ಅನುಷಾ ಕೋಳಕಾರ ಸೇರಿದಂತೆ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಪ್ರಶಿಕ್ಷಣಾರ್ಥಿಗಳ ಒಕ್ಕೂಟದ ಚಟುವಟಿಕೆಗಳ ಸಮಾರೋಪ ಹಾಗೂ ದೀಪದಾನ ನೆರವೇರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















