ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬರ ವೀಕ್ಷಣೆ, ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆ: ಸಚಿವ ಕಾಶಪ್ಪನವರ

ಹಿಂಗಾರು ಬಿತ್ತನೆ ಬೀಜ ವಿತರಣೆ: ರೈತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ಬದ್ಧ

ಹುನಗುಂದ: ಮಳೆ ಕೊರತೆಯಿಂದ ಇಡೀ ರಾಜ್ಯದಲ್ಲಿ ಬರಗಾಲ ಆವರಿಸಿ ಅನ್ನದಾತರು ಸಂಕಷ್ಟದಲ್ಲಿದ್ದರೂ, ಇಲ್ಲಿಯವರೆಗೆ ಕೇಂದ್ರ ಸರ್ಕಾರ ಬರ ವೀಕ್ಷಣೆ ಹಾಗೂ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬುಧವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹಿಂಗಾರು ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ರೈತರಿಗೆ ಸಾಂಕೇತಿಕವಾಗಿ ಬೀಜ ವಿತರಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ವಿಫಲವಾಗಿದೆ. ಕಬ್ಬು ಬೆಳೆಗಾರರಿಗೂ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಹಣವನ್ನೂ ನೀಡುತ್ತಿಲ್ಲ. 2023ರಲ್ಲಿ ರಾಜ್ಯದಲ್ಲಿ ಬರ ಆವರಿಸಿ ರೈತರ ಬೆಳೆಗಳು ಹಾನಿಗೊಳಗಾದ ಸಂದರ್ಭದಲ್ಲಿ ರಾಜ್ಯದ 136 ಶಾಸಕರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಆರೋಪಿಸಿದರು.
ಈಗಾಗಲೇ ರಾಜ್ಯ ಸರ್ಕಾರ 180ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಮೊದಲ ಹಂತದಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರಿಗೆ ತಲಾ ₹2,500ರಂತೆ ಒಟ್ಟು ₹1,250 ಕೋಟಿ ಪರಿಹಾರ ವಿತರಿಸಲಾಗಿದೆ. ರೈತರಿಗೆ ಉಂಟಾಗಿರುವ ಬೆಳೆ ನಷ್ಟವನ್ನು ತುಂಬಿಕೊಟ್ಟು ಅವರಿಗೆ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ರೈತರ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
₹421 ಕೋಟಿ ಬೆಳೆ ಹಾನಿ ಪರಿಹಾರಕ್ಕೆ ಪ್ರಸ್ತಾವನೆ
ಜಂಟಿ ಕೃಷಿ ನಿರ್ದೇಶಕ ಟಿ. ರುದ್ರೇಶಪ್ಪ ಮಾತನಾಡಿ, ಜಿಲ್ಲೆಯ 10 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿದೆ. ಈಗಾಗಲೇ ಜಿಲ್ಲೆಯ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹421 ಕೋಟಿ ಬೆಳೆ ಹಾನಿ ಪರಿಹಾರಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಮುಖ್ಯಮಂತ್ರಿ ನೇಗಿಲು ಯೋಗಿ ಯೋಜನೆಯಡಿ 30 ತಾಲೂಕುಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಹುನಗುಂದ ತಾಲೂಕು ಕೂಡ ಸೇರಿದೆ. ಮೂರು ಎಕರೆ ಹೊಂದಿರುವ ಸಣ್ಣ ರೈತರಿಗೆ ಬಿತ್ತನೆ ಸಂದರ್ಭದಲ್ಲಿ ಅನುಕೂಲವಾಗಲು ಮೂರು ಕಂತುಗಳಲ್ಲಿ ತಲಾ ₹1,500 ರಂತೆ ಒಟ್ಟು ₹4,500 ನೀಡುವ ಯೋಜನೆ ಮಂಜೂರಾಗಿದ್ದು, ಸರ್ಕಾರದ ಆದೇಶ ಬರುವುದು ಬಾಕಿಯಿದೆ ಎಂದರು.
ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಗ್ರಾಮಾನುಭವ ಯೋಜನೆಯನ್ನೂ ಜಾರಿಗೆ ತರಲಾಗಿದೆ. ಅಕ್ಟೋಬರ್ 5ರಂದು ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಆಗಮಿಸಲಿದೆ ಎಂದು ತಿಳಿಸಿದರು.
ಕೃಷಿಕ ಸಮಾಜದ ಅಧ್ಯಕ್ಷ ಸಂಜೀವ ಜೋಶಿ ಮಾತನಾಡಿ, ರೈತಾಪಿ ವರ್ಗಕ್ಕೆ ಅನುಕೂಲವಾಗುವಂತಹ ಸಣ್ಣ ಕೈಗಾರಿಕೆಗಳನ್ನು ತಾಲೂಕಿನಲ್ಲಿ ಸ್ಥಾಪಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಬಾಗಲಕೋಟೆ ಕೃಷಿ ಇಲಾಖೆ ಉಪನಿರ್ದೇಶಕ ಕೆ.ಎಸ್. ಅಗಸನಾಳ, ಸಹಾಯಕ ನಿರ್ದೇಶಕ ಬಸವರಾಜ ಟಕ್ಕಳಕಿ, ಮುಖಂಡರಾದ ಶೇಖರಪ್ಪ ಪರೂತಿ, ಬಸಯ್ಯ ಹಿರೇಮಠ, ನಾಗಪ್ಪ ಬೀಳಗಿ, ಶರಣಗೌಡ ಅರಸಿಬಿಡಿ, ಬಸವರಾಜ ಹೊಸಮನಿ, ಎಪಿಎಂಸಿ ಕಾರ್ಯದರ್ಶಿ ಆರ್.ಎಂ. ದಂಡಿನ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಮಹೇಶ ಕಟಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!