ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಪಮುಖ್ಯಮಂತ್ರಿ ಕ್ಷೇತ್ರದಲ್ಲೂ IMCT ಕೇಂದ್ರ ತಂಡದಿಂದ ಬರಗಾಲಕ್ಕೆ ಹಾನಿಗೊಳಗಾದ ಬೆಳೆಗಳ ಸಮೀಕ್ಷೆ.

ಕೊರಟಗೆರೆ. ತಾಲ್ಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬದಹಳ್ಳಿಗ್ರಾಮಕ್ಕೆ ಐಎಂಸಿಟಿ ತಂಡದ ಮುಖ್ಯಸ್ಥರಾದ ಮಾನ್ಯ ಅಜಿತ್ ಕುಮಾರ್ ಸಾಹು, ಐಎಎಸ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಬಿ ವಿ ಅಶ್ವಿಜಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯಿಂದ ರಾಗಿ ಮೆಕ್ಕೆಜೋಳ, ನೆಲಗಡಲೆ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸ್ಥಳದಲ್ಲಿಯೇ ಪರಿಶೀಲಿಸಲಾಯಿತು.

ಗ್ರಾಮದಲ್ಲಿನ ರಾಗಿ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿದ ತಂಡದ ಸದಸ್ಯರು, ಬೆಳೆಗಳ ಬೆಳವಣಿಗೆಯ ಹಂತ, ಪ್ರಸ್ತುತ ಬೆಳೆಗಳ ಸ್ಥಿತಿ, ಮಳೆಯ ಕೊರತೆಯಿಂದ ಉಂಟಾಗಿರುವ ಪರಿಣಾಮ ಹಾಗೂ ಬೆಳೆ ನಷ್ಟದ ಪರಿಸ್ಥಿತಿಯನ್ನು ಸ್ಥಳದಲ್ಲಿಯೇ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ಅಧಿಕಾರಿಗಳು ಗ್ರಾಮದಲ್ಲಿನ ಮಳೆ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ ಹಾಗೂ ಬರ ಪರಿಸ್ಥಿತಿಯಿಂದ ರೈತರಿಗೆ ಉಂಟಾಗಿರುವ ಪರಿಣಾಮಗಳ ಕುರಿತು ಐಎಂಸಿಟಿ ತಂಡಕ್ಕೆ ವಿವರವಾದ ಮಾಹಿತಿಯನ್ನು ನೀಡಿದರು.

ಐಎಂಸಿಟಿ ತಂಡವು ಅಧಿಕಾರಿಗಳು ಮತ್ತು ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಮಳೆಯ ಕೊರತೆ, ಬೆಳೆಗಳ ಇಳುವರಿ, ಕೃಷಿ ಚಟುವಟಿಕೆಗಳಿಗೆ ಲಭ್ಯವಾಗುತ್ತಿರುವ ನೀರಿನ ಪ್ರಮಾಣ, ಬೆಳೆಗಳಿಗೆ ಎದುರಾಗಿರುವ ಸಮಸ್ಯೆಗಳು ಹಾಗೂ ಸರ್ಕಾರದಿಂದ ಅಗತ್ಯವಿರುವ ನೆರವು ಮತ್ತು ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮುಂಗಾರು ಮಳೆ ಬರೆದಿದ್ದರಿಂದ ಗ್ರಾಮದಲ್ಲಿನ ನೀರಿನ ಲಭ್ಯತೆ ಹಾಗೂ ಪ್ರಸ್ತುತ ಜಲ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿದ ತಂಡವು, ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ಕೈಗೊಳ್ಳಲಾಗುತ್ತಿರುವ ಪರ್ಯಾಯ ವ್ಯವಸ್ಥೆಗಳ ಬಗ್ಗೆಯೂ ಮಾಹಿತಿ ಪಡೆಯಿತು.

ಕ್ಷೇತ್ರ ಪರಿಶೀಲನೆಯ ಸಂದರ್ಭದಲ್ಲಿ ಬರ ಪರಿಸ್ಥಿತಿಯ ನೈಜ ಸ್ಥಿತಿಗತಿಗಳನ್ನು ಸ್ಥಳದಲ್ಲಿಯೇ ಅರಿತುಕೊಳ್ಳುವ ಉದ್ದೇಶದಿಂದ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ, ಗ್ರಾಮಸ್ಥರು ಹಾಗೂ ರೈತರೊಂದಿಗೆ ನೇರವಾಗಿ ಮಾಹಿತಿ ಪಡೆಯಲಾಯಿತು.
ಈ ಮೂಲಕ ಬರದಿಂದ ಉಂಟಾಗಿರುವ ಬೆಳೆ ನಷ್ಟ, ನೀರಿನ ಲಭ್ಯತೆ ಮತ್ತು ರೈತರ ಸಮಸ್ಯೆಗಳ ಕುರಿತು ಐಎಂಸಿಟಿ ತಂಡವು ನೈಜ ವಾಸ್ತವ ಪರಿಸ್ಥಿತಿಯ ಮಾಹಿತಿಯನ್ನು ಸಂಗ್ರಹಿಸಿದರು.
ಕೇಂದ್ರ ಸರ್ಕಾರದ ಅಂತರ-ಸಚಿವಾಲಯ ತಂಡವು (IMCT) ಜಮೀನುಗಳಿಗೆ ಭೇಟಿ ನೀಡಿ ವೈಜ್ಞಾನಿಕವಾಗಿ ಹಾನಿ ಪರಿಶೀಲನೆ ಮಾಡಲು ಇಂದು
ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಕಂಬದಹಳ್ಳಿ ,ತುಂಬಾಡಿ, ಗ್ರಾಮದ ಸರ್ವೇ ನಂ. 16/2 ಹಾಗೂ 16/6ರಲ್ಲಿ ಬರಗಾಲದಿಂದ ಹಾನಿಗೊಳಗಾದ ಮುಸುಕಿನ ಜೋಳ ,ನೆಲಗಡಲೆ, ರಾಗಿ,ಬೆಳೆಯನ್ನು ಪರಿಶೀಲಿಸಿ ಬೆಳೆ ಪರಿಹಾರ ನೀಡಲು ಪೂರ್ಣ ಪ್ರಮಾಣದ ಸಂಕ್ಷಿಪ್ತ ಮಾಹಿತಿ ಪಡೆದರು.

ಬರಗಾಲದಿಂದ ಉಂಟಾಗಿರುವ ಬೆಳೆ ಹಾನಿಯ ಪ್ರಮಾಣವನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಬರ ಪರಿಹಾರ ಘೋಷಣೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸುವುದು ಈ ಭೇಟಿಯ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಕೃಷಿ ನಿರ್ದೇಶಕರ ಕಲ್ಲೇಶ್, ತಹಶೀಲ್ದಾರ್ ಮಂಜುನಾಥ್, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಬಸವರಾಜು RI, ಅಶ್ವಥ್ ನಾರಾಯಣ್, ಗೋವಿಂದರಾಜು ಇನ್ನೂ ಅನೇಕ ಆಡಳಿತ ವರ್ಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಸನ್ನ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!