ಹರಪನಹಳ್ಳಿ ತಾಲೂಕಿನ ಎನ್.ಶೀರನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರೋಬಾಲ್ ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದರು.
ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ಕೆಂಚಪ್ಪ ಶಿಕ್ಷಕರಾದ ಮಲ್ಲನಾಯಕ್, ಶಿವ ರುದ್ರಯ್ಯ ಶಿಕ್ಷಕ ವರ್ಗ, ಎಸ್ಡಿಎಂಸಿ ಸದಸ್ಯರು, ಗ್ರಾಮದ ಯುವಕರು, ಮುಖಂಡರು ಹಾಗೂ ಸಿಬ್ಬಂದಿ ಅಭಿನಂದಿಸಿದರು.
- ಕರುನಾಡ ಕಂದ ಸುದ್ದಿ




















