ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಖಂಡೇಶ್ವರ ಪತ್ತಾರರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಗುಳೇದಗುಡ್ಡ: ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದ ಸಲ್ಲಿಸಿದ ಸೇವೆಯ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ೨೦೨೬-೨೭ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಶ್ರೀ ಗಾನಯೋಗಿ ಪಂಚಾಕ್ಷರಿ ಸಂಗೀತ ವಿದ್ಯಾಲಯದ ಪ್ರಾಚಾರ್ಯರು, ಸಂಗೀತ ನೃತ್ಯ ಅಕಾಡೆಮಿ ಮಾಜಿ ಸದಸ್ಯರೂ ಆದ ಹಿರಿಯ ಸಂಗೀತ ವಿದ್ವಾನ್ ಶ್ರೀ ಅಖಂಡೇಶ್ವರ ಎಂ. ಪತ್ತಾರ ಅವರು ಆಯ್ಕೆಯಾಗಿದ್ದಾರೆ.
ಇದೇ ಅಕ್ಟೋಬರ್ ೪ ರಂದು ಬೆಂಗಳೂರಿನ ಕಲಾಗ್ರಾಮದ ಸಾಂಸ್ಕೃತಿಕ ಸಭಾಂಗಣದಲ್ಲಿ ಅಕಾಡೆಮಿಯು ಆಯೋಜಿಸಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಿರಿಯ ಸಂಗೀತ ವಿದ್ವಾನ್ ಶ್ರೀ ಅಖಂಡೇಶ್ವರ ಎಂ. ಪತ್ತಾರ ಅವರಿಗೆ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಶುಭಾ ದನಂಜನ, ಹಿರಿಯ ಸಾಹಿತಿ ಬರಗೂರ ರಾಮಚಂದ್ರಪ್ಪ ಹಾಗೂ ಗಣ್ಯರು ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸುವರು.
ಸಂಗೀತ ಕ್ಷೇತ್ರದಲ್ಲಿ ೪ ದಶಕಗಳಿಂದ ಸಲ್ಲಿಸಿದ ಅನುಪಮ ಸೇವೆಯ ಮೂಲಕ ಸಂಗೀತ ಕಲೆಯನ್ನು ಈ ಭಾಗದಲ್ಲಿ ಮನೆ ಮನೆಗೂ ತಲುಪಿಸುವಲ್ಲಿ ಹಾಗೂ ಸಾವಿರಾರು ಬಡ ಮಕ್ಕಳಿಗೆ ಸಂಗೀತದ ವಾತಾವರಣ ಬೆಳೆಸುವಲ್ಲಿ ಕ್ರೀಯಾಶೀಲರಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸುತ್ತಿರುವ ಹಿರಿಯ ಗಾಯಕ ಶ್ರೀ ಅಖಂಡೇಶ್ವರ ಎಂ. ಪತ್ತಾರ ಅವರ ಅವಿಸ್ಮರಣೆಯ ಸಾಧನೆಗೆ ಕರ್ನಾ ಟಕ ಕಲಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶಾಸಕ ಭೀಮಸೇನ್ ಚಿಮ್ಮನಕಟ್ಟಿ, ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ ಹು.ಮೇಟಿ, ಮಾಜಿ ಶಾಸಕರಾದ ಎಸ್.ಜಿ. ನಂಜಯ್ಯನಮಠ, ರಾಜಶೇಖರ ಶೀಲವಂತ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಕಾಂಗ್ರೆಸ್ ಮುಖಂಡ ಹೊಲಸು ಶೆಟ್ಟರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ತಾಲ್ಲೂಕ ಕಾನಿಪ ಪತ್ರಕರ್ತರ ಸಂಘದ ಅಧ್ಯಕ್ಷ ಬಸವರಾಜ ಯಂಡಿಗೇರಿ, ಹಿರಿಯ ಶಿಕ್ಷಣ ತಜ್ಞರು ಡಾ, ವಿ.ಎ. ಬೆನಕನಾಳ, ವಿಶ್ರಾಂತ ಪ್ರಾಧ್ಯಾಪಕ ಸಾಹಿತಿ ಡಾ, ರಾಜಶೇಖರ ಬಸುಪಟ್ಟದ, ಸಾಹಿತಿ ಡಾ, ಚಂದ್ರಶೇಖರ ಕಾಳನ್ನವರ, ಪಿಇಟಿ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ, ಕನ್ನಡ ಪ್ರಾಧ್ಯಾಪಕ,ಸಾಹಿತಿ ಡಾ, ಸಣವೀರಣ್ಣ ದೊಡ್ಡಮನಿ, ಡಾ,ಎಚ್. ಎಸ್.ಘಂಟಿ, ಡಾ, ಸಿ.ಎಂ.ಜೋಶಿ ಹಾಗೂ ಸಂಗೀತದ ಅಭಿಮಾನಿಗಳು ಅಭಿನಂದಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!