ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಂಧಿ ಭವನದಲ್ಲಿ 40 ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ.

ಗ್ರಾಮೀಣ ಸಮಸ್ಯೆ ಬೆಳಕಿಗೆ ತರುವ ಕೆಲಸವಾಗಬೇಕು: ಪತ್ರಕರ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಸಲಹೆ

ವಿಜಯಪುರ: ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ನೀಡಿರುವ ಬಸ್ ಪಾಸ್ ಸದ್ಬಳಕೆ ಮಾಡಿಕೊಂಡು, ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳನ್ನು ಬೆಳಕಿಗೆ ತರುವ ಮೂಲಕ ಸರ್ಕಾರದ ಕಣ್ತೆರೆಸುವ ಕೆಲಸವನ್ನು ಗ್ರಾಮೀಣ ಪತ್ರಕರ್ತರು ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು. ಅವರು ಜಿಲ್ಲೆಯ ವಿವಿಧ ತಾಲೂಕುಗಳ ೪೦ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿ ಯಿಂದ ಕೊಡಮಾಡಿದ ಗ್ರಾಮೀಣ ಬಸ್ ಪಾಸ್‌ಗಳನ್ನು ನಗರದ ಗಾಂಧಿ ಭವನದಲ್ಲಿ ಶನಿವಾರ ವಿತರಿಸಿ ಮಾತನಾಡಿದರು. ನಮ್ಮ ಭವ್ಯ ಭಾರತ ಪ್ರತಿಶತ ಶೇ.೮೦ರಷ್ಟು ಹಳ್ಳಿಗಳಿಂದ ಕೂಡಿದೆ. ಗ್ರಾಮಗಳ ಅಭಿವೃದ್ಧಿಯಾದಾಗಲೇ ಭಾರತದ ನೈಜ ಆಬಿ ವೃದ್ಧಿ ಎಂದು ರಾಷ್ಟ್ರಪಿತ ಮಹಾತ್ಮಾ ‘ಗಾಂಧೀಜಿಯವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಗ್ರಾಮೀಣ ಪತ್ರಕರ್ತರು ಭವ್ಯ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು. ಗ್ರಾಮೀಣ ಪತ್ರಕರ್ತರು ತಮ್ಮ ಹೋಬಳಿ ಇಲ್ಲವೇ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಸಂಚರಿಸಲು ಅನುಕೂಲ ಆಗಬೇಕು ಎಂಬ ಸದುದ್ದೇಶದಿಂದ ಹಿಂದಿನ ಮುಖ್ಯಮಂತ್ರಿಗಳು ಬಸ್ ಪಾಸ್ ವ್ಯವಸ್ಥೆಗೆ ಅಸ್ತು ನೀಡಿದ್ದರು. ಆದರೆ ಈ ಬಸ್ ಪಾಸ್ ವಿತರಣೆಗೆ ಮಾನದಂಡಗಳ ಬಸ್ ಗೊಂದಲದಿಂದಾಗಿ ಪಾಸ್ ವಿತರಣೆಯಲ್ಲಿ ಕೊಂಚ ವಿಳಂಬವಾಗಿತ್ತು. ಈಗ ಮಾನದಂಡಗಳನ್ನು ಸರಳೀಕರಣಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ೪೦ ಜನ ಪತ್ರಕರ್ತರಿಗೆ ಬಸ್ ಪಾಸ್ ಗಳನ್ನು ರಾಜ್ಯ ಸರ್ಕಾರ ವಿತರಿಸುತ್ತಿರುವುದು ಸಂತಸದ ಸಂಗತಿ ಎಂದರು. ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಸಾಶನ,ಕುಟುಂಬ ಮಾಸಾಶನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ, ಬಸ್ ಪಾಸ್, ಮಾಧ್ಯಮ ಕಿಟ್, ತಂತ್ರಜ್ಞಾನ ತರಬೇತಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿರುವುದನ್ನು ಈ ಸಂದರ್ಭದಲ್ಲಿ ಸಚಿವರು ಉಲ್ಲೇಖಿಸಿದರು. ಈಗ ಎಐ ತಂತ್ರಜ್ಞಾನ ಜಾಲತಾಣಗಳಿಂದ ಸಂವಹನ ಸಾಮಾಜಿಕ ವೇಗ ಪಡೆದುಕೊಂಡಿದೆ. ನಮಗೆ ಪತ್ರಿಕೆ ಓದಿದಾಗಲೇ ಸಮಾಧಾನ ಎಂದು ಮುದ್ರಣದ ಮಾಧ್ಯಮದ ಮಹತ್ವವನ್ನು ವಿವರಿಸಿದರು. ಸಚಿವರು ” ಪತ್ರಕರ್ತರು ತಂತ್ರಜ್ಞಾನವನ್ನು ಅರ್ಥೈಸಿಕೊಂಡು ನಿಮ್ಮನ್ನು ಆಧುನಿಕ ತಂತ್ರಜ್ಞಾನಕ್ಕೆ ಅರ್ಪಿಸಿಕೊಂಡು ಕೆಲಸ ಮಾಡಬೇಕು ಎಂದು ಸಚಿವರು ಪತ್ರಕರ್ತರಿಗೆ ಸಲಹೆ ನೀಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ನಮ್ಮ ಗ್ರಾಮೀಣ ಪತ್ರಕರ್ತರ ಸಮಸ್ಯೆಗೆ ಕಿವಿಯಾದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶ ಅಮರೇಶ ದೊಡಮನಿ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ . ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪತ್ರಕರ್ತರ ಪೋತದಾರ, ಸಂಘದ ಜಿಲ್ಲಾ ಉಪಾಧ್ಯಕ್ಷ ಶಶಿಕಾಂತ ಮೆಂಡೆಗಾರ. ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ವಿವಿಧ ತಾಲೂಕಿನಿಂದ ಆಗಮಿಸಿದ ಪತ್ರಕರ್ತರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!