ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ಕೊಯನಾಡು ರಬ್ಬರ್ ಎಸ್ಟೇಟ್ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದೆ.
ಬಹುಕಾಲದಿಂದ ಅಭಿವೃದ್ಧಿ ಕಾಣದೆ, ಮಳೆಗಾಲದಲ್ಲಿ ಕೆಸರುಮಯವಾಗಿ ಸ್ಥಳೀಯರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದ ಈ ರಸ್ತೆ ಅಭಿವೃದ್ಧಿ, ಗ್ರಾಮಸ್ಥರ ಬಹುದಿನಗಳ ಪ್ರಮುಖ ಬೇಡಿಕೆಯಾಗಿತ್ತು.
ಜನರ ಸಮಸ್ಯೆ ಹಾಗೂ ಅಗತ್ಯವನ್ನು ಮನಗಂಡು, ವಿಶೇಷ ಅನುದಾನ ಒದಗಿಸಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿರುವುದರಿಂದ ಇದೀಗ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ.
ಜನರ ಬೇಡಿಕೆಗೆ ಸ್ಪಂದಿಸಿ, ಅಭಿವೃದ್ಧಿಗೆ ಆದ್ಯತೆ ನೀಡಿದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ಸ್ಥಳೀಯ ನಿವಾಸಿಗಳ ಪರವಾಗಿ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದರು.
ವರದಿ: ಪ್ರಿತುನ್ ಪೂವಣ್ಣ




















