ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗಿನ ಪ್ರತಿಷ್ಠಿತ ಗೌರಮ್ಮ ದತ್ತಿ ಪ್ರಶಸ್ತಿಗೆ ಭಾಜನರಾದ ಡಾ. ಕೆ.ಪಿ. ಲಲಿತರವರ ಕೊಡಗಿನ ಜಾನಪದ ಕಥೆಗಳು

ವಿರಾಜಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗಳಲ್ಲಿ ಒಂದಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಸಾಹಿತಿ ಡಾ. ಕೆ.ಪಿ. ಲಲಿತ (ರಶ್ಮಿ ನಂಜಪ್ಪ ಕಳ್ಳಿಚಂಡ) ಅವರು ರಚಿಸಿರುವ ‘ಕೊಡಗಿನ ಜಾನಪದ ಕಥೆಗಳು’ ಕೃತಿ ಆಯ್ಕೆಯಾಗಿದೆ.

ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಿಸಿರುವ ಉತ್ತಮ ಕೃತಿಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವ ಉದ್ದೇಶದಿಂದ ಗೌರಮ್ಮ ಅವರ ಪುತ್ರ ಬಿ.ಜಿ. ವಸಂತ ಅವರು ಈ ದತ್ತಿಯನ್ನು ಸ್ಥಾಪಿಸಿದ್ದಾರೆ. ಇದುವರೆಗೆ 23 ಮಂದಿ ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದ್ದು, 2026-27ನೇ ಸಾಲಿನ 24ನೇ ಪ್ರಶಸ್ತಿಗಾಗಿ ಒಟ್ಟು 9 ಲೇಖಕಿಯರು ತಮ್ಮ ಕೃತಿಗಳನ್ನು ಸಲ್ಲಿಸಿದ್ದರು.

ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳನ್ನು ತೀರ್ಪುಗಾರರನ್ನಾಗಿ ನೇಮಿಸಲಾಗಿದ್ದು, ಅವರು ಸಲ್ಲಿಕೆಯಾಗಿದ್ದ ಎಲ್ಲ ಕೃತಿಗಳನ್ನು ಪರಿಶೀಲಿಸಿ ಅಂಕಗಳನ್ನು ನೀಡಿದ್ದರು. ತೀರ್ಪುಗಾರರು ಕಳುಹಿಸಿದ ಅಂಕಪಟ್ಟಿಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆಯಲ್ಲಿ ಪರಿಶೀಲಿಸಿ, ಅಂಕಗಳನ್ನು ಕ್ರೋಢೀಕರಿಸಿದಾಗ ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಯು
ಅತ್ಯಧಿಕ ಅಂಕಗಳನ್ನು ಪಡೆದು ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

ಡಾ. ಕೆ.ಪಿ. ಲಲಿತ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೊಡಗಿನಲ್ಲಿ ಪೂರ್ಣಗೊಳಿಸಿ, ಮಂಗಳೂರು ವಿಶ್ವವಿದ್ಯಾಲಯದಿಂದ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿಯೊಂದಿಗೆ ಪದವಿ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದಿರುವ ಅವರು, ಕೊಡಗಿನ ಸ್ಥಳನಾಮಗಳಿಗೆ ಸಂಬಂಧಿಸಿದ ಸಂಶೋಧನಾ ಮಹಾಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಇವರ ಸಂಶೋಧನಾ ಮಹಾಪ್ರಬಂಧವನ್ನು ಸಾಹಿತ್ಯ ಅಕಾಡೆಮಿ ಪುಸ್ತಕ ರೂಪದಲ್ಲಿ ಪ್ರಕಟಿಸಿದೆ. ‘ವಿವಕ್ಷ’, ‘ವಿವೇಚನೆ’, ‘ಜೀವಂತ ಪಳೆಯುಳಿಕೆಗಳ ಕುರಿತು’, ‘ಕೊಡಗಿನ ಭಾಷೆ ಮತ್ತು ಸಂಸ್ಕೃತಿ’, ‘ಕೊಡಗಿನ ಜನಪದ ಕಥೆಗಳು’, ‘ಶೋಧನೆಯ ಹಾದಿಯಲ್ಲಿ’ ಸೇರಿದಂತೆ ಹಲವು ಸಂಶೋಧನಾ ಕೃತಿಗಳನ್ನು ಅವರು ರಚಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ಜರ್ನಲ್‌ಗಳಲ್ಲಿ 29 ಸಂಶೋಧನಾ ಲೇಖನಗಳು ಪ್ರಕಟವಾಗಿದ್ದು, ಅವರ ಸಂಶೋಧನಾ ಕಾರ್ಯಕ್ಕೆ ಭಾರತ ಸರ್ಕಾರದ ನೀತಿ ಆಯೋಗ ನೀಡುವ ‘ಅಬ್ದುಲ್ ಕಲಾಮ ರಾಷ್ಟ್ರ ಪ್ರಶಸ್ತಿ’ ಲಭಿಸಿದೆ.
ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿರುವ ಅವರು ಭಾಷಾಂತರ, ಸಂಶೋಧನೆ ಹಾಗೂ ಜಾನಪದ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!