ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

​ಹುನಗುಂದದಲ್ಲಿ ‘ಡಾ. ಎಂ. ಎಂ. ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತು’ ರಾಷ್ಟ್ರೀಯ ವಿಚಾರ ಸಂಕಿರಣ

​ಹುನಗುಂದ: ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ (ರಿ.) ಹಾಗೂ ಬಾಗಲಕೋಟೆ ಜಿಲ್ಲೆಯ ಹುನಗುಂದದ ವಿ.ಮ.ವಿ.ವ. ಸಂಘದ ವಿಜಯ ಮಹಾಂತೇಶ ಕೃಪಾ ಪೋಷಿತ ಎಸ್. ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿಜಯ ಶಂಕರಪ್ಪ ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ “ಡಾ. ಎಂ. ಎಂ. ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತು” ರಾಷ್ಟ್ರೀಯ ವಿಚಾರ ಸಂಕಿರಣವನ್ನು ದಿನಾಂಕ 08.10.2026, ಗುರುವಾರ ಬೆಳಿಗ್ಗೆ 10.00 ಗಂಟೆಗೆ ಹುನಗುಂದದ ಕಾಲೇಜು ಸಭಾಭವನದಲ್ಲಿ ಆಯೋಜಿಸಲಾಗಿದೆ.

​ದಿವ್ಯ ಸಾನಿಧ್ಯ ಹಾಗೂ ಉದ್ಘಾಟನೆ :

ಸಮಾರಂಭದ ದಿವ್ಯ ಸಾನಿಧ್ಯವನ್ನು ಹುನಗುಂದದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಶ್ರೀ ಮ.ನಿ.ಪ್ರ. ಡಾ. ಗುರುಮಹಾಂತ ಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಧಾರವಾಡದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀರಣ್ಣ ರಾಜೂರ ಉದ್ಘಾಟಿಸಲಿದ್ದಾರೆ.
ಹುನಗುಂದ ವಿ.ಮ.ವಿ.ವ. ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಸಿ. ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದು, ಗೌರವ ಕಾರ್ಯದರ್ಶಿಗಳಾದ ಡಾ. ಮಹಾಂತೇಶ ಎಸ್. ಕಡಪಟ್ಟಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

​ವಿಚಾರ ಗೋಷ್ಠಿ ಹಾಗೂ ವಿಷಯ ಮಂಡನೆ :

ವಿಚಾರ ಗೋಷ್ಠಿಯಲ್ಲಿ ಬನಹಟ್ಟಿಯ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಬಿ. ಆರ್. ಪೊಲೀಸ್‌ಪಾಟೀಲ ಅವರು ಕಲಬುರ್ಗಿಯವರ ‘ಖುರೇ ಖುರೇ ಸಂಗ್ಯಾ ಬಾಳ್ಯಾ’ ನಾಟಕದ ಕುರಿತು ಹಾಗೂ ಮುಧೋಳದ ಸಾಹಿತಿಗಳಾದ ಡಾ. ಸಂಗಮೇಶ ಕಲ್ಯಾಣಿ ಅವರು ‘ನೀ ರಾಗ ನಿಂತೀನಿ ನೀರಡಿಸಿ’ ಕವನ ಸಂಕಲನದ ಕುರಿತು ವಿಷಯ ಮಂಡಿಸಲಿದ್ದಾರೆ.

​ಉಪಸ್ಥಿತಿ :
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಎಸ್. ಆರ್. ಗೋಲಗೊಂಡ, ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಎಲ್. ಎನ್. ಕುಲಕರ್ಣಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎಸ್. ಬಿ. ಚಳಗೇರಿ ಹಾಗೂ ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷರಾದ ಪ್ರೊ. ಶ್ರೀನಿಧಿ ಆರ್. ಎ. ಸೇರಿದಂತೆ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!