ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2127 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

ಓಲೆಮಠದ ಶ್ರೀ ಆನಂದ್ ದೇವರು ಹೇಳಿಕೆ.

ಡಾ. ಡಿ. ವೀರೇಂದ್ರ ಹೆಗಡೆಯವರ ಮಧ್ಯವರ್ಜನ ಶಿಬಿರ ಕಾರ್ಯ ಶ್ಲಾಘನೀಯ.

ವಿಜಯಪುರ: ಗ್ರಾಮೀಣ ಭಾಗದಲ್ಲಿ ಜನತೆ ಆರೋಗ್ಯವಾಗಿದ್ದಾಗ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂಬ ಉದ್ದೇಶದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರು ಮಧ್ಯವರ್ಜನ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾದದ್ದು ಎಂದು ಜಮಖಂಡಿಯ ಓಲೆಮಠದ ಶ್ರೀ ಆನಂದ ದೇವರು ಸ್ವಾಮೀಜಿ ಹೇಳಿದರು.

ವಿಜಯಪುರ 01 ತಾಲೂಕಿನ ಜುಮನಾಳ ವಲಯದ ಹಿಟ್ಟಿನಹಳ್ಳಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ (ರಿ.) ಟ್ರಸ್ಟ್ ವಿಜಯಪುರ-01 ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ವಿಜಯಪುರ ಜಿಲ್ಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2127ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಮನುಷ್ಯ ತನ್ನ ಕ್ಷಣಿಕ ಸುಖಕ್ಕಾಗಿ ಕೆಟ್ಟ ಚಟ್ಟಗಳನ್ನು ರೂಡಿಸಿಕೊಂಡು ಜೀವನವನ್ನು ಹಾಳು ಮಾಡಿಕೊಳ್ಳುವಂತ ಇಂದಿನ ದಿನಗಳಲ್ಲಿ ನೀವು ದುಶ್ಚಟ್ಟ ಮುಕ್ತರಾಗಲು ಹಾಗೂ ಬುದ್ಧಿವಂತರಾಗಲು ಇಂತಹ ಶಿಬಿರದಲ್ಲಿ ನೀವು ಸ್ವ ಇಚ್ಛೆಯಿಂದ ಭಾಗವಹಿಸಿರುವುದು ಶ್ಲಾಘನೀಯ ಇದರಿಂದಾಗಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿ ಗಳಾಗಿ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಜೀವನ ನಡೆಸುವಂತ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಿ ಎಂದು ತಿಳಿಸಿದರು.

ವಿಜಯಪುರ ನಗರದ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ ಧರ್ಮಸ್ಥಳ ಸಂಸ್ಥೆಯು ಬಹಳಷ್ಟು ಸಮಾಜಮುಖಿ ಕೆಲಸ ಮಾಡುತ್ತಿದ್ದು ಡಾ. ಡಿ. ವೀರೇಂದ್ರ ಹೆಗಡೆಯವರು ರಾಜಕೀಯ ವ್ಯಕ್ತಿಗಳು ಮಾಡದೇ ಇರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಸಾಕಷ್ಟು ಕುಟುಂಬಗಳಿಗೆ ಮಾದರಿಯಾಗಿದೆ. ಇವತ್ತು 57 ಕುಟುಂಬಗಳ ಕಣ್ಣೀರು ಒರೆಸುವಂಥ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಬಹಳ ಉತ್ತಮವಾದ ಕೆಲಸವಾಗಿದೆ ಇಂಥ ಒಳ್ಳೆಯ ವ್ಯಕ್ತಿಯನ್ನು ಜನರು ದೇವರ ಹಾಗೆ ಪೂಜಿಸಬೇಕು ಎಂದು ತಿಳಿಸಿದರು. ಕುಡಿತವನ್ನು ಬಿಟ್ಟು ಒಳ್ಳೆಯ ಆಹಾರ ಪ್ರತಿದಿನ ಹಾಲು ಸೇವನೆ ಮಾಡಲು ತಿಳಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಬುರ್ಗಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ರಾಜೇಶ್ ಕೆ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಎನ್ನುವುದು ಸರ್ವ ಜನಾಂಗೀಯ ಶಾಂತಿಯ ತೋಟವಿದ್ದಂತೆ ಡಾ. ಡಿ. ವೀರೇಂದ್ರ ಹೆಗಡೆಯವರು ನಡೆಸುತ್ತಿರುವ ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಮಧ್ಯವರ್ಜನ ಶಿಬಿರವು ಇಲ್ಲಿವರೆಗೆ ನಡೆದು 01 ಲಕ್ಷಕ್ಕೂ ಹೆಚ್ಚು ಮದ್ಯವ್ಯಸನಿ ಪಾನಮುಕ್ತರನ್ನಾಗಿ ಮಾಡಿ ನವಜೀವನ ಸಮಿತಿಗಳನ್ನು ರಚಿಸಿ ಸಮಾಜದಲ್ಲಿ ಇಂದು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.

ಪರಮಪೂಜ್ಯ ಯೋಗೇಶ್ವರ್ ಮಾತಾಜಿ ಆರೋಡಮಠ ಬುರಣಾಪುರ ರವರು ನವಜೀವನ ಸಮಿತಿಯ ಸದಸ್ಯರಿಗೆ ಮತ್ತು ಅವರ ಕುಟುಂಬದವರಿಗೆ ಶುಭ ಆಶೀರ್ವಚನ ಮಾಡಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸೋಮನಗೌಡ (ಅಪ್ಪು) ಪಾಟೀಲ್ ಮನಗೂಳಿ ರವರು ಮಾತನಾಡಿ ಜನಜಾಗೃತಿಯಲ್ಲಿ ಬರುವ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯ್ಕ್,ಗೌರವಾಧ್ಯಕ್ಷರಾದ ಡಿ.ಎಸ್ ಇಂಡಿ, ಶಿವಾನಂದ್ ದೇಸಾಯಿ, ಸಿದಗೊಂಡ ಬಿರಾದಾರ್, ಮದ್ಯವರ್ಜನ ಶಿಬಿರದ ಅಧ್ಯಕ್ಷರಾದ ರಾಜೇಂದ್ರ ಬಿರಾದಾರ್, ಸಂಜೀವ್ ಐಹೊಳೆ, ಸಂಗನಗೌಡ ನಾಡಗೌಡ್, ಸ್ವಪ್ನ ಕಣಮುಚನಾಳ, ಮಧು ಪಾಟೀಲ್, ಲಲಿತಾ ಬಿರಾದಾರ್, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ತಾಲೂಕಿನ ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಮಾಧ್ಯಮದವರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!